BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ತಡೆ ಪ್ರಕರಣ: ಶಾಸಕರ ಸಹಿತ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲು ಖಂಡನೀಯ


ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ತಡೆಹಿಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಮಣಿಪಾಲ ದಲ್ಲಿ ನಡೆದ ಪ್ರತಿಭಟನೆ ಸಂಬಂಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಸಹಿತ ಪ್ರತಿಭಟ ನಾಕಾರರ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಂ. ಸುವರ್ಣ ಖಂಡಿಸಿ ದ್ದಾರೆ.


ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುವುದು ಹಕ್ಕು. ಸರ್ಕಾರ ಸಂವಿಧಾನ ದತ್ತ ಹಕ್ಕನ್ನು ‌ಮೊಟಕು ಗೊಳಿಸಲು ಯತ್ನಿಸುತ್ತಿದೆ. ಸರ್ಕಾರವೇ ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಿಕ್ಷಕರಿಗಾದ ಅನ್ಯಾಯದ ವಿರುದ್ಧ ನ್ಯಾಯಯುತವಾಗಿ ಪ್ರತಿಭಟಿಸಿರುವ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು ವಾಮ ಮಾರ್ಗದಿಂದ ಪ್ರತಿಭಟನಾ ಕಾರರನ್ನು ಬೆದರಿಸುವ ಹತಾಶ ಯತ್ನದಲ್ಲಿ ತೊಡಗಿದ್ದು ಅದು ಸಫಲವಾಗದು ಎಂದು ಗೀತಾಂಜಲಿ ಸುವರ್ಣ ಎಚ್ಚರಿಸಿದ್ದಾರೆ.


ಹಗರಣಗಳ ಸರಮಾಲೆ ಹಾಗೂ ದ್ವೇಷ ರಾಜಕಾರಣದಿಂದಾಗಿ ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ತೀವ್ರ ಮಳೆಯಿಂದಾಗಿ ಆಸ್ತಿಪಾಸ್ತಿ ಕಳಕೊಂಡ ಸಂತ್ರಸ್ತರತ್ತ ಮುಖ ಮಾಡದ ಸರಕಾರ ಮುಲಭೂತ ಆದ್ಯತೆಗಳ ಸಹಿತ ಅಭಿವೃದ್ಧಿ ಯನ್ನೂ ಕಡೆಗಣಿಸಿದೆ. 

ರಸ್ತೆ ದುರಸ್ತಿಗೂ ಹಣ ನೀಡದ ಸ್ಥಿತಿ ತಲುಪಿರು ವಾಗ ಅನ್ಯಾಯದ ವಿರುದ್ಧ ರಸ್ತೆ ತಡೆ ಮಾಡಿದವರ ವಿರುದ್ಧ ಕೇಸು ದಾಖಲಿಸುವ ಮೂಲಕ ಸರ್ಕಾರ ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದೆ ಎಂದು ಗೀತಾಂಜಲಿ ಸುವರ್ಣ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!