BREAKING
ಕಲಾಸಂಸ್ಕೃತಿ

ರಂಗಭೂಮಿ (ರಿ.) ಉಡುಪಿಯ 45ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ – 2024

 

ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ “ರ0ಗಭೂಮಿ (ರಿ.) ಉಡುಪಿ” ತನ್ನ 60ನೇ ಸಂಭ್ರಮದ ವರ್ಷದಲ್ಲಿ, ಇದೇ ನವಂಬರ್ ತಿಂಗಳ 3ನೇ ವಾರದಲ್ಲಿ ದಿ| ಡಾ| ಟಿ.ಎಂ.ಎ. ಪೈ, ದಿ| ಎಸ್.ಎಲ್. ನಾರಾಯಣ ಭಟ್ ಮತ್ತು ದಿ| ಮಲ್ಪೆ ಮಧ್ವರಾಜ್ ಸ್ಮಾರಕ ರಾಜ್ಯ ಮಟ್ಟದ 45ನೇ ಕನ್ನಡ ನಾಟಕ ಸ್ಪರ್ಧೆಯನ್ನು ನಡೆಸಲಿದೆ. 

ಕರ್ನಾಟಕ ರಾಜ್ಯದ (ಕಾಸರಗೋಡು ಸಹಿತ) ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಟ 1 ಘಂಟೆ 30 ನಿಮಿಷ ಹಾಗೂ ಗರಿಷ್ಟ 2 ಘಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. ಈ ಬಾರಿ ಸ್ಪರ್ಧೆಗೆ ಗರಿಷ್ಠ 12 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. 

ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ35,000/-, ರೂ25,000/-, ರೂ15,000/-ದ ನಗದು ಬಹುಮಾನಗಳನ್ನು ಹಾಗೂ ಪರ್ಯಾಯ ಫಲಕಗಳನ್ನು ನೀಡಲಾಗುವುದು. ಅಲ್ಲದೆ ಶ್ರೇಷ್ಠ ನಿರ್ದೇಶನ, ನಟ, ನಟಿ, ಸಂಗೀತ, ಬೆಳಕು, ರಂಗಪರಿಕರ, ಪ್ರಸಾಧನ, ಬಾಲನಟನೆ/ ಹಾಸ್ಯ ಪಾತ್ರಗಳಿಗೆ ನಗದು ಸಹಿತ ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಅತ್ಯಂತ ಶಿಸ್ತುಬದ್ಧವಾಗಿದ್ದ ತಂಡಕ್ಕೆ ವಿಶೇಷ ಪುರಸ್ಕಾರವಿರುವುದು. 

 ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ಊಟ, ವಸತಿ ಜೊತೆಗೆ ಉಡುಪಿಗೆ ಹೋಗಿ ಬರುವ ಒಟ್ಟು ದೂರಕ್ಕೆ ಕಿ.ಮಿ ಗೆ ರೂ.20/ ರಂತೆ ಕನಿಷ್ಠ ರೂ. 2,000/-, ಗರಿಷ್ಠ ರೂ. 22,000/- ಪ್ರಯಾಣ ವೆಚ್ಚ ನೀಡಲಾಗುವುದು ಹಾಗೂ ಪ್ರತೀ ತಂಡಕ್ಕೆ ಗೌರವಧನವಾಗಿ ರೂ. 5000/-ವನ್ನು ನೀಡಲಾಗುವುದು.

 ಭರ್ತಿ ಮಾಡಿದ ಪ್ರವೇಶ ಪತ್ರ ಸ್ವೀಕರಿಸಲು 2024ರ ಅಕ್ಟೋಬರ್ 18 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ತಂಡಗಳು ಪ್ರವೇಶ ಪತ್ರಕ್ಕಾಗಿ ಪ್ರದೀಪ್‌ಚಂದ್ರ ಕುತ್ಪಾಡಿ, ಪ್ರಧಾನ ಕಾರ್ಯದರ್ಶಿ, `ರಂಗಭೂಮಿ', ಕುತ್ಪಾಡಿ, ಉಡುಪಿ-576 108 ಮೊಬೈಲ್ ಸಂಖ್ಯೆ : ೯೪೪೮೯೫೨೮೪೭(ಪ್ರದೀಪ್‌ಚಂದ್ರ ಕುತ್ಪಾಡಿ) ಇವರನ್ನು ಸಂಪರ್ಕಿಸಬೇಕು ಅಥವಾ ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿದಿಯೂರು (೯೮೪೪೭೪೨೧೬೬) ಅಥವಾ ಜತೆ ಕಾರ್ಯದರ್ಶಿಗಳಾದ ಶ್ರೀಪಾದ ಹೆಗಡೆ (೯೮೪೫೧೧೧೪೪೯) ಹಾಗೂ ವಿವೇಕಾನಂದ ಎನ್. (೯೪೪೯೩೬೭೫೯೫) ಇವರನ್ನು ಸಂಪರ್ಕಿಸಬಹುದು ಎಂದು “ರಂಗಭೂಮಿ” ಪ್ರಕಟಣೆ ತಿಳಿಸಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!