ಜಿಲ್ಲಾ ಕಾಂಗ್ರೆಸ್ಸಿನ ಅಸಹನೀಯ ಸ್ಥಿತಿ:
ನಿರಂತರವಾಗಿ ಚುನಾವಣೆಗಳಲ್ಲಿ ತಮ್ಮ ವಿರುದ್ಧದ ಜನಾದೇಶದಿಂದಾಗಿ ಉಡುಪಿ ಜಿಲ್ಲೆಯಲ್ಲಿ ನೆಲೆಯನ್ನು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷವೂ ಅಸಹನೀಯ ಸ್ಥಿತಿಯನ್ನು ತಲುಪಿದೆ ಹಾಗೂ ಜಿಲ್ಲೆಯಲ್ಲಿ ಸಂಘಟನಾ ಶಕ್ತಿಯನ್ನು ಹೊಂದಿರದ ಕಾಂಗ್ರೆಸ್ ಪಕ್ಷವೂ ಸೇಡಿನ ರಾಜಕಾರಣವನ್ನು ತನ್ನ ಶ್ರೀ ರಕ್ಷೆಯನ್ನಾಗಿಸಿಕೊಂಡಿದೆ.
ತಮ್ಮ ವಿರುದ್ಧದ ಪ್ರತಿಭಟನೆಯನ್ನು ರಾಜಕೀಯ ಸವಾಲಾಗಿ ಸ್ವೀಕರಿಸುವ ಬದಲು ದ್ವೇಷದ ರಾಜಕಾರಣಕ್ಕೆ ಬಳಸಿಕೊಂಡು ಪ್ರತಿಭಟನಾಕಾರರ ಮೇಲೆ ಪ್ರಕರಣವನ್ನು ದಾಖಲಿಸುವ ಮೂಲಕ ತಮ್ಮ ಸೋಲಿನ ಸೇಡನ್ನು ತೀರಿಸಿಕೊಳ್ಳುತ್ತಿದೆ.
ಅಧಿಕಾರದ ದುರ್ಬಳಕೆಯ ಮೂಲಕ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಬೆದರಿಸಬಹುದೆಂದು ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣದಲ್ಲಿ ತೊಡಗಿಕೊಂಡಿದೆ. ಕಾಂಗ್ರೆಸ್ಸಿನ ಈ ಗೊಡ್ಡು ಬೆದರಿಕೆಗಳನ್ನು ಸವಾಲಾಗಿ ಸ್ವೀಕರಿಸುತ್ತಾರೆ ವಿನಃ ಹೆದರುವ ಜಾಯಮಾನದ ಮನೋಸ್ಥಿತಿಯನ್ನು ನಮ್ಮ ಕಾರ್ಯಕರ್ತರು ಹೊಂದಿರುವುದಿಲ್ಲ ಎಂದು ತಿಳಿಸಿದ್ದಾರೆ.