ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಉದ್ಯಾವರದ ಸೈಂಟ್ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟನ ಸ್ನೇಹಾಲಯದ ವಿದ್ಯಾರ್ಥಿಗಳಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜವರು
ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ. ಫಾ ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಅಗಲುವಿಕೆ ನಮಗೆ ತುಂಬಲಾಗದ ನಷ್ಟವಾಗಿದೆ. ಅದರ ಸಲುವಾಗಿ ಈ ಕಾರ್ಯಕ್ರಮದ ಎಲ್ಲಾ ಶ್ರೇಯಸ್ಸು ದಿ. ಫಾ ವಲೇರಿಯನ್ ಮೆಂಡೋನ್ಸ ಇವರಿಗೆ ಅರ್ಪಿಸುತ್ತೇನೆ. ಅವರಿಗೆ ಗೌರವ ಸಮರ್ಪಣೆಯಿಂದ ನಾವು ಮೊದಲು ಮಾನಸ ಪುನರ್ವಸತಿ ಕೇಂದ್ರ ಪಾಂಬೂರು ಇಲ್ಲಿನ ವಿಶೇಷ ಚೇತನ ಮಕ್ಕಳೊಂದಿಗೆ ಆಚರಿಸಿಕೊಂಡಿದ್ದು, ಇಂದು ಈ ಕಾರ್ಯಕ್ರಮವನ್ನು ಇಲ್ಲಿ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸ್ಥಳೀಯ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ಉದ್ಯಾವರದ ಧರ್ಮ ಗುರುಗಳಾದ ರೇ/ಫಾ/ ಅನಿಲ್ ಡಿಸೋಜ ಇವರು ಮಾತನಾಡಿ ಸಂಸ್ಥೆಯಿಂದ ಇನ್ನಷ್ಟು ಜವಾಬ್ದಾರಿಯುತವಾದ ಸಾಮಾಜಿಕ ಕಾರ್ಯಕ್ರಮಗಳು ಮೂಡಿ ಬರಲಿ ಎಂದು ಶುಭ ಹಾರೈಸಿದರು.
ಸೈಂಟ್ ಮೇರಿಸ್ ಕ್ಯಾಥೆಡ್ರಲ್ ಬ್ರಹ್ಮಾವರ ಇಲ್ಲಿನ ಧರ್ಮ ಗುರುಗಳಾದ ಫಾ. ಲಾರೆನ್ಸ್ ಡೆವಿಡ್ ಕ್ರಾಸ್ತ ಇವರು ಮಾತನಾಡಿ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ದಿ. ವಲೆರಿಯನ್ ಮೆಂಡೋನ್ಸ ಇವರು ನುಡಿದಂತೆ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಸಂಸ್ಥೆಯು ಬೆಳೆಯುತ್ತಾ ಇತರರನ್ನು ಬೆಳೆಸಿಕೊಂಡು ಸಾಗಲಿ ಎಂದು ಶುಭ ಹಾರೈಸಿದರು.
ಮುಖ್ಯ ಅತಿಥಿ ಸೀಮಾ ಎಸ್ ಹಳದಿಪುರರವರು ಮಾತನಾಡಿ, ಮಹಿಳೆಯರು ಇಂದು ಉನ್ನತ ಸ್ಥಾನವನ್ನು ಅಲಂಕರಿಸಿಕೊಂಡು ಜವಾಬ್ದಾರಿಯುತವಾಗಿ ಕೆಲಸ ಕಾರ್ಯಗಳನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಅವಿರತ ಪರಿಶ್ರಮದೊಂದಿಗೆ ಉನ್ನತ ಮಟ್ಟದಲ್ಲಿ ಸ್ಥಾನವನ್ನು ಅಲಂಕರಿಸಿಕೊಂಡಿದ್ದಾರೆ. ಇಂದು ಚಪ್ಪಾಳೆ ತಟ್ಟುವ ಕೈಗಳು ಮುಂದೆ ಚಪ್ಪಾಳೆಯನ್ನು ಗಿಟ್ಟಿಸಿಕೊಳ್ಳುವುದೇ ಸಾಧನೆ ಎಂದು ಸಂಸ್ಥೆಯ ವಿದ್ಯಾರ್ಥಿನಿಯರಿಗೆ ಕಿವಿ ಮಾತು ತಿಳಿಸಿದರು.
ಮುಖ್ಯ ಅತಿಥಿ ಮಿಲಾಗ್ರೀಸ್ ಕಲ್ಯಾಣ್ಪುರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನೇರಿ ಕರ್ನೆಲಿಯೊ ಮಾತನಾಡಿ, ಸಂಸ್ಥೆಯು ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಮತ್ತು ದಿ. ಫಾ ವಲೇರಿಯನ್ ಮೆಂಡೋನ್ಸ ಇವರ ಸ್ಮರಣಾರ್ಥವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಭಾಗವಹಿಸಿದ್ದಕ್ಕೆ ಸಂತೋಷವಾಗಿದೆ. ಈ ಸಂಸ್ಥೆಯು ಹೆಚ್ಚಿನ ಶಾಖೆಗಳನ್ನು ಪ್ರಾರಂಭಿಸಿ ಇನ್ನು ಅನೇಕ ರೀತಿಯಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸೇವೆಯನ್ನು ನೀಡಲಿ ಎಂದು ಶುಭ ಹಾರೈಸಿದರು.
ಸ್ಥಳೀಯ ಸಾಮಾಜಿಕ ಕಾರ್ಯಕರ್ತರ ಮತ್ತು ಖ್ಯಾತ ನಿರೂಪಕರು ಸ್ಟೀವನ್ ಕುಲಾಸೊ ಸಂಸ್ಥೆಯ ಏಳಿಗೆಯ ಬಗ್ಗೆ ಶ್ಲಾಘಿಸಿದರು ಹಾಗೂ ಶುಭ ಹಾರೈಸಿದರು.
ಸ್ಥಳೀಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮಗಳಾದ ವo. ಫಾ. ಅನಿಲ್ ಡಿಸೋಜ ಮತ್ತು ಬ್ರಹ್ಮಾವರ ಸಂತ ಮೇರಿಸ್ ಕಾಥೆದ್ರಲ್ ನ ಧರ್ಮಗುರು ವo. ಫಾ. ಡೇವಿಡ್ ಕ್ರಾಸ್ತಾ ಆಶೀರ್ವದೊಂದಿಗೆ ಶುಭ ಹಾರೈಸಿದರು.
ಸಂತ ವಿನ್ಸೆಂಟ್ ಪಲ್ಲೊಟ್ಟಿ ಕಾನ್ವೆಂಟಿನ ಸುಪಿರಿಯರ್ ಸಿ. ಲೀನಾ ಇವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ ನ ಲೆಕ್ಕ ವ್ಯವಸ್ಥಾಪಕರಾದ ಕುಮಾರ್ ಹೆಚ್ ಎನ್, ಕಿರಿಯ ಸಹಾಯಕರಾದ ದೀಕ್ಷಿತ್ ನಾಯ್ಕ್ ಮತ್ತು ಸಂಸ್ಥೆಯ ಪರಿಚಾರಕರಾದ (ಅಟೆಂಡರ್) ವಿವಿಯನ್ ಮರ್ವಿನ್ ನೊರೊನ್ಹಾ ಹಾಗೂ ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಉಪಸ್ಥಿತರಿದ್ದರು.