BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಆರೋಗ್ಯ

ಉಚಿತ ಆರೋಗ್ಯಕರ ವೃದ್ಧಾಪ್ಯದ ಜಾಗೃತಿ ಮತ್ತು ಸ್ಕ್ರೀನಿಂಗ್ ಪರೀಕ್ಷೆ ಕಾರ್ಯಕ್ರಮ

 


ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯು ಆರೋಗ್ಯವಂತ ವೃದ್ಧಾಪ್ಯದ ಅಧ್ಯಯನ ಕೇಂದ್ರ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ಸಹಯೋಗದಲ್ಲಿ ಹಿರಿಯ ನಾಗರಿಕರ ಸಮುದಾಯಕ್ಕಾಗಿ ಮಹತ್ವದ ಕಾರ್ಯಕ್ರಮವನ್ನು ಪ್ರಕಟಿಸಿದೆ. 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವಯಸ್ಕರಿಗೆ ಉಚಿತ ಆರೋಗ್ಯಕರ ವೃದ್ಧಾಪ್ಯದ ಸ್ಕ್ರೀನಿಂಗ್ ಪರೀಕ್ಷೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1 ರಂದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00 ರವರೆಗೆ ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ದೃಷ್ಟಿ ಮತ್ತು ಶ್ರವಣ ಪರೀಕ್ಷೆಗಳು, ಸ್ಮರಣೆ ಮತ್ತು ಮಾನಸಿಕ ಆರೋಗ್ಯ ತಪಾಸಣೆಗಳು, ಬೀಳುವಿಕೆಯ ಅಪಾಯದ ವಿಶ್ಲೇಷಣೆ, ಮಧುಮೇಹ-ಪಾದದ ತಪಾಸಣೆ ಮತ್ತು ಕ್ರಿಯಾತ್ಮಕ ಸಾಮರ್ಥ್ಯದ ತಪಾಸಣೆಗಳನ್ನು ಒಳಗೊಂಡ ಸಮಗ್ರ ಆರೋಗ್ಯ ತಪಾಸಣೆ ಸೇವೆಗಳನ್ನು ಸಹ ನೀಡುತ್ತದೆ.

ಡಾ. ಟಿಎಂಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಶಿಕಿರಣ್ ಉಮಾಕಾಂತ್ ಮತ್ತು ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನ ಡೀನ್ ಡಾ ಅರುಣ್ ಮಯ್ಯ, ಹಾಗೂ ಡಾ.ಸೆಬಾಸ್ಟಿಯನ್ ಅನಿತಾ ಡಿಸೋಜಾ, ಆರೋಗ್ಯವಂತ ವೃದ್ಧಾಪ್ಯದ ಅಧ್ಯಯನ ಕೇಂದ್ರ, ಮಾಹೆ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳುತ್ತಾ, “ನಾವು ವಯಸ್ಸಾದಂತೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯವಾಗಿರುತ್ತದೆ. ಈ ಕಾರ್ಯಕ್ರಮವು ಕೇವಲ ಸ್ಕ್ರೀನಿಂಗ್ ಪರೀಕ್ಷೆ ಗಳ ಬಗ್ಗೆ ಅಲ್ಲ; ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ನಮ್ಮ ಹಿರಿಯರಿಗೆ ಶಿಕ್ಷಣ ನೀಡಲು ಮತ್ತು ಅಧಿಕಾರ ನೀಡಲು ಇದು ಒಂದು ಅವಕಾಶ. ಈ ಮೌಲ್ಯಯುತ ಸೇವೆಗಳ ಲಾಭವನ್ನು ಪಡೆಯಲು ನಾವು ಎಲ್ಲಾ ಅರ್ಹ ವ್ಯಕ್ತಿಗಳಿಗೆ ಆಹ್ವಾನ ನೀಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!