ಕಾರ್ಕಳ : ರಸ್ತೆ ದಾಟುತ್ತಿದ್ದ ವೇಳೆ ಕಂಟೈನರ್ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೈಲೂರಿನಲ್ಲಿ ಸೆ. 30ರಂದು ಸಂಭವಿಸಿದೆ.
ಯರ್ಲಪ್ಪಾಡಿಯ ವಸಂತ ಆಚಾರ್ಯ (64) ಎಂಬಾವರೇ ಮೃತಪಟ್ಟ ದುರ್ದೈವಿ. ಬೈಲೂರಿನಲ್ಲಿ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ ಸಂದರ್ಭ ಉಡುಪಿಯಿಂದ ಕಾರ್ಕಳ ಕಡೆ ಸಾಗುತ್ತಿದ್ದ ಲಾರಿ ವಸಂತ ಅವರಿಗೆ ಡಿಕ್ಕಿಯಾಗಿದೆ.
ಪರಿಣಾಮ ವಸಂತ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೃತದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿಡಲಾಗಿದೆ.