BREAKING
ಅಪರಾಧ

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಹತ್ಯೆ! ಕೃತ್ಯದ ಬಳಿಕ ಖುದ್ದು ಪೊಲೀಸರಿಗೆ ಕರೆ ಮಾಡಿ ತಿಳಿಸಿದ ಆರೋಪಿ!

ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ.

ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕೃತ್ಯ ಎಸಗಿದ ಬಳಿಕ ಆರೋಪಿಯು ಖುದ್ದು ಪೊಲೀಸರಿಗೆ ಕರೆ ಮಾಡಿ, ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಡಾ.ಅರುಣ್ ಕೆ., ಎಎಸ್ಪಿ ಸಿದ್ದಲಿಂಗಪ್ಪ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ನಡೆದಿದಂತೆ ಕಂಡುಬಂದರೂ ಬೇರೆ ಏನಾದರೂ ಕಾರಣ ಇದೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!