Header Ads Widget

ಉಚ್ಚಿಲ : ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಕಳವು!

ಉಚ್ಚಿಲ ದೇವಸ್ಥಾನದ ಹೊರಬಾಗದಲ್ಲಿ ನಿಲ್ಲಿಸಿದ್ದ ಕಾರಿನ ಎಡಬದಿಯ ಗಾಜು ಒಡೆದು ಲ್ಯಾಪ್ಟಾಪ್ ಅನ್ನು ಕಳವು ಮಾಡಲಾದ ಘಟನೆ ಇಂದು (10/09/24) ನಡೆದಿದೆ.

ಉಡುಪಿ ನಿವಾಸಿ ವಸಂತ್ ಅವರು ಕುಟುಂಬ ಸಮೇತ ನವರಾತ್ರಿಯ ಪ್ರಯುಕ್ತ ಉಚ್ಚಿಲ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸು ಕಾರಿನ ಬಳಿ ಬಂದಾಗ ವಿಷಯ ಬೆಳಕಿಗೆ ಬಂದಿದೆ. ದೇವಸ್ಥಾನದ ಬಳಿ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜನ್ನು ಒಡೆದು ಖದೀಮರು ಸುಮಾರು 45,000 ಬೆಲೆಬಾಳುವ ಲ್ಯಾಪ್ಟಾಪ್ ಅನ್ನು ಕದ್ದಿದ್ದಾರೆ.

ಪೊಲೀಸರಿಗೆ ವಿಷಯ ತಿಳಿಸಿದಾಗ ಲ್ಯಾಪ್ಟಾಪ್ ನ ಸೀರಿಯಲ್ ನಂಬರ್ ಇದ್ದರೆ ಮಾತ್ರ ಕೇಸ್ ಮಾಡಲು ಸಾಧ್ಯ ಎಂದಿರುವರಂತೆ.