BREAKING
ಕರಾವಳಿ

ಉಚ್ಚಿಲ ದಸರಾ : ಕಣ್ಮಣಸೆಳೆದ ವೈಭವದ ಶೋಭಾಯಾತ್ರೆ

 

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ 3ನೇ ವರ್ಷದ ಉಚ್ಚಿಲ ದಸರಾ 2024 ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ನವದುರ್ಗೆಯರು ಸಹಿತ ಶಾರದಾ ಮಾತೆಯ ವಿಗ್ರಹಗಳ ಅದ್ದೂರಿ ಶೋಭಾಯಾತ್ರೆಯ ಮೂಲಕ ಜಲಸ್ತಂಭನ ಕಾರ್ಯಕ್ರಮ‌ ಕಾಪುವಿನ ಕಡಲ ಕಿನಾರೆಯಲ್ಲಿ ಶನಿವಾರ ತಡರಾತ್ರಿ ನಡೆಯಿತು.

ಮೆರವಣಿಗೆಯಲ್ಲಿ ಸಾಗಿ ಬಂದ ದೇವಿಯರ ವಿಗ್ರಹಗಳಿಗೆ ಕಾಪು ಕಡಲ ಕಿನಾರೆಯಲ್ಲಿ ಕಾಶಿ ಗಂಗಾರತಿ ಮಾದರಿಯಲ್ಲಿ ಗಂಗಾರತಿ ಜೊತೆಗೆ ಸೇರಿದ ಸಾವಿರಾರು ಸುಮಂಗಲೆಯರಿಂದ ಸಾಮೂಹಿಕ ಮಹಾ ಮಂಗಳಾರತಿ ನೆರವೇರಿದ ಬಳಿಕ ಏಕಕಾಲದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ವಿಗ್ರಹಗಳನ್ನು ಸಮುದ್ರದಲ್ಲಿ ಜಲಸ್ತಂಭನ ಮಾಡಲಾಯಿತು. ಸುಡುಮದ್ದು ಪ್ರದರ್ಶನ, ರಸಮಮಜರಿ ಕಾರ್ಯಕ್ರಮವೂ ನಡೆಯಿತು.


ಈ ಸಂದರ್ಭ ದೇವಳದ ರುವಾರಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಸಮಿತಿಯ ಗೌರವ ಸಲಹೆಗಾರ ನಾಡೋಜ ಡಾ. ಜಿ ಶಂಕರ್‌, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್‌, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಾಜನ ಸಂಘದ ಉಪಾಧ್ಯಕ್ಷರಾದ ದಿನೇಶ್‌ ಎರ್ಮಾಳು, ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಮಟ್ಟು, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್ ಸಹಿತ ಗಣ್ಯರು ಉಪಸ್ಥಿತರಿದ್ದರು.

ಜಲಸ್ತಂಭನ ಸಂದರ್ಭ 250 ಜನ ಸ್ವಯಂ ಸೇವಕರು ಸಹಕರಿಸಿದ್ದರು.

ದೇವಳದ ಪ್ರಬಂಧಕ ಸತೀಷ್‌ ಅಮೀನ್‌ ಪಡುಕರೆ ನಿರೂಪಿಸಿ, ವಂದಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!