ಕಾಲೇಜು ಮುಗಿಸಿ ತನ್ನ ಸ್ನೇಹಿತರ ಜೊತೆಗೆ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಟಿಪ್ಪರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ಮಂಗಳವಾರ(ಅ.1) ರಂದು ನಡೆದಿದೆ.
ಧನುಷ್ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿಯಾಗಿದ್ದು ಇಂದು (ಮಂಗಳವಾರ) ಮಧ್ಯಾಹ್ನ ಕಾಲೇಜು ಮುಗಿಸಿ ತನ್ನ ಸ್ನೇಹಿತರ ಜೊತೆ ಫುಟ್ ಪಾಥ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷ್ ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 ಕಾಮೆಂಟ್‌ಗಳು