ಉಡುಪಿ : ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಪೆ ಠಾಣಾ ವ್ಯಾಪ್ತಿಯ ಹೂಡೆಯಲ್ಲಿ ಏಳು ಮಂದಿ ಬಾಂಗ್ಲಾದೇಶೀಯರು ಅಕ್ರಮವಾಗಿ ನೆಲೆಸಿರುವ ಬಗ್ಗೆ ಮಾಹಿತಿ ಬಂತು. ಅಕ್ರಮ ನೆಲೆಸಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ.
ಮಹಮ್ಮದ್ ಮಾಣಿಕ್ ಎಂಬವನು ಇವರ ಜತೆ ವಾಸವಿದ್ದ. ಆತ ನಕಲಿ ಪಾಸ್ ಪೋರ್ಟ್ ಬಳಸಿ, ಮಂಗಳೂರು ವಿಮಾನ ನಿಲ್ದಾಣ ಮೂಲಕ ದುಬೈಗೆ ತೆರಳಲು ಮುಂದಾಗಿದ್ದ. ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಲ್ಲಿ ಬಂಧಿತ ವ್ಯಕ್ತಿಯ ಮಾಹಿತಿಯನ್ನು ಇಮಿಗ್ರೇಶನ್ ಅಧಿಕಾರಿಗಳು ನಮಗೆ ನೀಡಿದ್ದಾರೆ.
ಈತನ ಜತೆ ವಾಸವಿದ್ದ ಏಳು ಮಂದಿಯನ್ನು ಪತ್ತೆ ಮಾಡಲಾಗಿದೆ. ಸದ್ಯ ಏಳು ಮಂದಿ ನಮ್ಮ ವಶದಲ್ಲಿದ್ದಾರೆ ವಿಚಾರಣೆ ನಡೆಸಿದಾಗ ಅವರ ಬಳಿ ನಕಲಿ ದಾಖಲೆಗಳು ಪತ್ತೆಯಾಗಿವೆ. ಕಳೆದ ಮೂರು ವರ್ಷಗಳಿಂದ ಈ ಕಡೆ ವಾಸವಿದ್ದಾರೆ. ನಕಲಿ ಆಧಾರ್ ಕಾರ್ಡ್ ಹೇಗೆ ಬಂತು, ಬಾರ್ಡರ್ ಹೇಗೆ ಕ್ರಾಸ್ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಮಲ್ಪೆ ಠಾಣೆಯಲ್ಲಿ ಕ್ರೈಂ ಸಂಖ್ಯೆ 138/24, 318, 319,336 ಕೇಸು ದಾಖಲಾಗಿದೆ. ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ, ನ್ಯಾಯಾಲಯಕ್ಕೆ ಶೀಘ್ರ ವರದಿ ಸಲ್ಲಿಸಲಾಗುವುದು ಎಂದು ಉಡುಪಿ ಎಸ್ಪಿ ತಿಳಿಸಿದ್ದಾರೆ