BREAKING
ಕಲಾಸಂಸ್ಕೃತಿ

ಮಂಡ್ಯ ರಮೇಶ್ ಅವರಿಗೆ 'ಪಂಚಮಿ ಪುರಸ್ಕಾರ -2025'

ಪಂಚಮಿ ಟ್ರಸ್ಟ್ (ರಿ),ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ  ಕೊಡಮಾಡುವ  'ಪಂಚಮಿ ಪುರ ಸ್ಕಾರ- 2025'ಕ್ಕೆ ಕನ್ನಡ ರಂಗ ಭೂಮಿಯ ಹಿರಿಯ ನಟ ಶ್ರೀ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾರವು ಗೌರವ ಧನ 1,00,000 (ಒಂದು ಲಕ್ಷ ರೂಪಾಯಿ) ಯೊಂದಿಗೆ ಪ್ರಶಸ್ತಿ ಪತ್ರ, ಪದಕ  ಒಳ ಗೊಂಡಿದೆ. ಜನ ವರಿ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು  ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಸಂಚಾಲಕ ರಾದ ರವಿರಾಜ್ ಎಚ್. ಪಿ. ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿಯ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೆೈ, ಉಪಾಧ್ಯಕ್ಷ ರಾದ ನಾಗರಾಜ್ ಹೆಬ್ಬಾರ್ ಮತ್ತು ವಿಘ್ನೇಶ್ವರ ಅಡಿಗ, ಪುರಸ್ಕಾರ ಸಮಿತಿಯ ಸಂಯೋಜಕರಾದ ಜನಾರ್ದನ ಕೊಡವೂರು ಉಪಸ್ಥಿತರಿದ್ದರು.


ಮಂಡ್ಯ ರಮೇಶ್ : ನಟ, ನಿರ್ದೇಶಕ, ರಂಗಶಿಕ್ಷಕ, ರಂಗ ಸಂಘಟಕ ಹಾಗೂ ಕಿರುತೆರೆ-ಚಲನಚಿತ್ರಗಳ ಹಿರಿಯ ಕಲಾವಿದ. ಮೈಸೂರಿನ ನಟನ ಸಂಸ್ಥೆ ಹಾಗೂ ರಂಗಶಾಲೆಯ ಸ್ಥಾಪಕ. ಹಿರಿಯ ರಂಗಕರ್ಮಿ. ನೀನಾಸಂ ರಂಗ ಶಿಕ್ಷಣ ಕೇಂದ್ರದಲ್ಲಿ ಅಧ್ಯಯನ ಮತ್ತು ನೀನಾಸಂ ತಿರುಗಾಟದ ಮೊದಲ ಮೂರು ವರ್ಷಗಳ ಕಲಾವಿದ.

ಮೈಸೂರಿನ ರಂಗಾಯಣದಲ್ಲಿ ಬಿ.ವಿ.ಕಾರಂತರ ಗರಡಿಯಲ್ಲಿ ರಂಗಕಾಯಕ. ಪ್ರಸನ್ನ, ಜಂಬೆ, ಕೆ.ವಿ.ಸುಬ್ಬಣ್ಣ, ಫಿಟ್ಸ್ ಬೆನೆವಿಟ್ಸ್ ಮುಂತಾದ ಗಣ್ಯ ನಿರ್ದೇಶಕರೊಂದಿಗೆ ದುಡಿದ ಅನುಭವ. ಕೇಂದ್ರ ಸಂಸ್ಕೃತಿ ಇಲಾಖೆಯ ರಂಗತಜ್ಞರ ಸಮಿತಿ ಸದಸ್ಯರಾಗಿ, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ, 

ರಂಗಾಯಣದ ರಂಗಸಮಾಜದ ಸದಸ್ಯರಾಗಿ, ಕರ‍್ಯ ನಿರ್ವಹಣೆ. ಭಾರತದ ಪುಟ್ಟ ಹಳ್ಳಿ–ಮಹಾನಗರಗಳಾದಿಯಾಗಿ ಅಮೇರಿಕಾದ ನ್ಯೂಯಾರ್ಕ್, ಕ್ಯಾಲಿಫೋರ್ನಿಯ, ವಾಷಿಂಗ್ಟ ನ್ ಡಿ.ಸಿ., ಆಸ್ಟೇಲಿಯಾ, ಜರ್ಮನಿ, ಆಸ್ಟಿçಯಾ, ಲಂಡನ್, ರ‍್ಲೆಂಡ್, ದುಬೈ, ನೇಪಾಳ, ಥೈಲ್ಯಾಂಡ್, ಸಿಂಗಾಪುರ್, ಶ್ರೀಲಂಕಾ, ಜಪಾನ್ ಮುಂತಾದ ಅನೇಕ ರಾಷ್ಟಗಳಲ್ಲಿ  ನಾಟಕ ಪ್ರದರ್ಶನ , ಶಿಬಿರಗಳನ್ನು ನಡೆಸಿದ ಅನುಭವ. ೨೦೧೮ರ ನವೆಂಬರ್ ತಿಂಗಳಲ್ಲಿ ಜಪಾನ್‌ನಲ್ಲಿ ನಡೆದ ಕನ್ನಡ ಹಬ್ಬದಲ್ಲಿ ಪಾಲ್ಗೊಂಡು ರಂಗಭೂಮಿ ಮತ್ತು ಕನ್ನಡದ ಕುರಿತಾಗಿ ಉಪನ್ಯಾಸ  ನೀಡಿದ್ದಾರೆ.


ಸಂಕ್ರಾಂತಿ, ಮಹಿಮಾಪುರ, ಮಾರನಾಯಕ, ಊರುಭಂಗ, ಯುಯುತ್ಸು, ಚೋರ ಚರಣದಾಸ, ಮಣ್ಣಿನಗಾಡಿ, ನಾಗಮಂಡಲ, ಅಗ್ನಿ ಮತ್ತು ಮಳೆ, ಚಾಮ ಚಲುವೆ, ಸುಭದ್ರಾ ಕಲ್ಯಾಣ, ಈ ಕೆಳಗಿನವರು, ಸಾಯೋ ಆಟ, ಅಲೀಬಾಬಾ ನಾಯಿತಿಪ್ಪ, ರತ್ನಪಕ್ಸಿ, ರಾಮ ರಹೀಮ, ಮೃಚ್ಛಕಟಿಕ, ಬೆತ್ತಲೆ ಅರಸನ ರಾಜರಹಸ್ಯ, ಕೃಷ್ಣೇಗೌಡರ ಆನೆ, ಸ್ಥಾವರವೂ ಜಂಗಮ ಮುಂತಾದ ಅಸಂಖ್ಯಾತ ನಾಟಕಗಳ ನಿರ್ದೇಶನ. ಜನುಮದ ಜೋಡಿ, ನಾಗಮಂಡಲ, ಕನಸುಗಾರ, ಅಮೃತಧಾರೆ, ಮಠ,  ರನ್ನ, ಒಗ್ಗರಣೆ, ಕಿರಗೂರಿನ ಗಯ್ಯಾಳಿ ಗಳು, ದಿ ವಿಲನ್, ಯಜಮಾನ, ಡೇರ್ ಡೆವಿಲ್ ಮುಸ್ತಾಫ, ತಲೆದ಼ಂಡ, ಫಿಸಿಕ್ಸ್ ಟೀಚರ್, ಕ್ರಾಂತಿ... ಮುಂತಾದ 310ಕ್ಕೂ ಹೆಚ್ಚಿನ ಚಲನಚಿತ್ರಗಳಲ್ಲಿ ಮತ್ತು ಕಿರುತೆರೆಯಲ್ಲಿ ಅಸಂಖ್ಯ ಧಾರಾವಾಹಿಗಳು, ಮಜಾ ಟಾಕೀಸ್ ಇತ್ಯಾದಿ ಕಿರುತೆರೆಯ ಕಾಮೆಡಿ  ಶೋಗಳಲ್ಲಿ ಅಭಿನಯಿಸಿದ್ದಾರೆ.

ನಾಗಮಂಡಲದಲ್ಲಿನ ಅಭಿನಯಕ್ಕೆ ರಾಜ್ಯ ಸರ್ಕಾರದ ಶ್ರೇಷ್ಠ ಪೋಷಕನಟ ಪ್ರಶಸ್ತಿ, ಆರ್ಯಭಟ  ಪ್ರಶಸ್ತಿ, ರಂಗಭೀಷ್ಮ, ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಮುಂತಾದ ವುಗಳು. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಂತರಾಷ್ಟ್ರೀಯ ಜ್ಯೂರಿ ಗಳ ವಿಶೇಷ ಮನ್ನಣೆಗೆ ಪಾತ್ರವಾದ ಉಪ್ಪಿನ ಕಾಗದ ಚಿತ್ರದ ಮುಖ್ಯ ಪಾತ್ರ. ಮೈಸೂರಿನಲ್ಲಿ ‘ನಟನ’ ರಂಗಶಾಲೆ ಜೊತೆ ಯಲ್ಲೇ ನಟನ ರಂಗಮಂದಿರ ಕಟ್ಟಿ, ನೂರಾರು ಕಲಾವಿದರನ್ನು ಬೆಳೆಸಿ ಮೈಸೂರಿನಲ್ಲಿ ರಂಗ ಕಾಯಕಕ್ಕೆ ಒಂದು ಪ್ರತಿಷ್ಠೆಯನ್ನು ತಂದು ಕೊಟ್ಟಿರುವ ಅಪರೂಪದ ಸಾಂಸ್ಕೃತಿಕ ಸಾಧಕ ಇವರು.

ಇಂಥ ರಂಗ ಸಾಧಕ ಶ್ರೀ ಮಂಡ್ಯ ರಮೇಶ್ ಅವರಿಗೆ 2017ರ ವಾರ್ಷಿಕ ಪ್ರಶಸ್ತಿಯನ್ನು ನೀಡಿ  ಕರ್ನಾಟಕ ನಾಟಕ ಅಕಾಡೆಮಿಯು ಗೌರವಿಸಿದೆ. ಮೈಸೂರು ವಿಶ್ವವಿದ್ಯಾನಿಲಯದ ಗುಬ್ಬಿ ವೀರಣ್ಣ ರಂಗಪೀಠಕ್ಕೆ ಎರಡನೇ ಅವಧಿಗೂ ಸಂದರ್ಶಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕೇಂದ್ರ ಸಂಸ್ಕೃತಿ ಇಲಾಖೆಯಲ್ಲಿ ಅವಜ್ಞಿತ ಕಲಾ ಪರಂಪರೆ  ತಜ್ಞರ ಸಮಿತಿ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.

ಮಂಡ್ಯ ರಮೇಶ್ ಅವರ ನೇತೃತ್ವದ ನಟನ ರಂಗಶಾಲೆಗೆ ಮೈಸೂರು ವಿಶ್ವವಿದ್ಯಾನಿಲ ಯದಿಂದ ಮಾನ್ಯತೆ ದೊರೆತಿದೆ. ಮೈಸೂರಿನಲ್ಲಿ ನಟನ ರಂಗಮಂದಿರ ನಿರ್ಮಿಸಿ, ನಟನ ರಂಗಶಾಲೆ, ನಟನ ಮಕ್ಕಳ ರಂಗಶಾಲೆಯನ್ನು ನಿರಂತರವಾಗಿ ಪೋಷಿಸಿಕೊಂಡು ಬರುತ್ತಿ ದ್ದಾರೆ. 

ಜೀ ಕನ್ನಡದ ಪ್ರತಿಷ್ಠಿತ ಕಾರ್ಯಕ್ರಮ ಶ್ರೀ ರಮೇಶ್ ಅರವಿಂದ್ ಅವರು ನಡೆಸಿಕೊಡುವ ‘ವೀಕೆಂಡ್  ವಿತ್ ರಮೇಶ್’ ಕಾರ್ಯಕ್ರಮದಲ್ಲಿ ತಮ್ಮ ರಂಗಭೂಮಿ ಸಾಧನೆಗಾಗಿ ಸಾಧಕರ ಕುರ್ಚಿಯನ್ನು ಅಲಂಕರಿಸಿರುತ್ತಾರೆ.



Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!