Header Ads Widget

ಎಂಜಿ ರಸ್ತೆಯ ಎಚ್ಎಸ್ಬಿಸಿ ಬ್ಯಾಂಕ್ಗೆ ಬಾಂಬ್ ಬೆದರಿಕೆ

ಬೆಂಗಳೂರು: ಎಂಜಿ ರಸ್ತೆಯಲ್ಲಿರುವ ಎಚ್ಎಸ್ಬಿಸಿ ಬ್ಯಾಂಕ್ನ ಶಾಖೆಗೆ ಬಾಂಬ್ ಬೆದರಿಕೆ ಬಂದಿದೆ. ಬ್ಯಾಂಕ್ನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸುವ ಇಮೇಲ್ವೊಂದನ್ನು ಬ್ಯಾಂಕ್ಗೆ ಕಳುಹಿಸಲಾಗಿದೆ. ಈ ಮೇಲ್‌ ಅನ್ನು ಗಮನಿಸಿದ ಕೂಡಲೇ ಬ್ಯಾಂಕ್‌ ನಲ್ಲಿದ ಎಲ್ಲಾ ಸಿಬ್ಬಂದಿ ಹಾಗೂ ಗ್ರಾಹಕರನ್ನು ಹೊರಹಗೆ ಕಳುಹಿಸಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಹಲಸೂರು ಠಾಣೆಯ ಪೊಲೀಸರು ಬ್ಯಾಂಕ್‌ ಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅದು ಹುಸಿ ಬಾಂಬ್ ಬೆದರಿಕೆ ಇರಬಹುದೆ ಎನುವುದು ಇನ್ನೂ ಸ್ಪಷ್ಟವಾಗಿಲ್ಲ.

ಏರ್ಪೋರ್ಟ್, ರೈಲು ನಿಲ್ದಾಣ, ಶಾಲೆ, ಕಾಲೇಜು, ಬ್ಯಾಂಕು ಇತ್ಯಾದಿ ಜನಸಂದಣಿ ಇರುವ ಜಾಗಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಸಿ ನಕಲಿ ಸಂದೇಶಗಳನ್ನು ಕಳುಹಿಸುವ ಬಹಳಷ್ಟು ಪ್ರಕರಣಗಳು ವರದಿಯಾಗುತ್ತಲೇ ಇವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಇಂತಹ ಬೆದರಿಕೆ ಕರೆಗಳ ಹಾವಳಿ ಹೆಚ್ಚಾಗಿದೆ.

ಕೆಲವು ವಾರಗಳ ಹಿಂದೆಯಷ್ಟೇ ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಇಮೇಲ್ ಸಂದೇಶ ಕಳುಹಿಸಲಾಗಿತ್ತು. ಅದನ್ನು ಪರಿಶೀಲಿಸಿದಾಗ ನಕಲಿ ಎನ್ನುವುದು ಪತ್ತೆಯಾಗಿತ್ತು. ಯಾವುದೇ ಬಾಂಬ್ ಪತ್ತೆಯಾಗಿರಲಿಲ್ಲ. ಬೆಂಗಳೂರಿನ ಬಿಐಟಿ, ಬಿಎಂಎಸ್ ಮತ್ತು ಎಂಎಸ್ ರಾಮಯ್ಯ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಕಳುಹಿಸಲಾಗಿತ್ತು. ಅದು ಹುಸಿ ಬೆದರಿಕೆ ಎಂದು ಸಾಬೀತಾಗಿತ್ತು. ಆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ದಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.