BREAKING
ಸುದ್ದಿ

ಕನಕದಾಸರ ಸಂದೇಶಗಳು ಸರ್ವವ್ಯಾಪ್ತಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕನಕದಾಸರು ತಮ್ಮ ಮಾತು ಹಾಗೂ ಸಂಗೀತದ ಮೂಲಕ ಜನರನ್ನು ಜಾಗೃತಿಗೊಳಿಸುವುದರ ಜೊತೆಗೆ ಅಸಮಾನತೆ ಭಾವವನ್ನು ದೂರಗೊಳಿಸಿ ಸುಂದರ ಸಮಾಜ ನಿಮಾರ್ಣಗೊಳ್ಳುವಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದಾರೆ. ಕನಕನ ಸಂದೇಶ ಸರ್ವವ್ಯಾಪ್ತಿ ಹಾಗೂ ಸರ್ವ ಸ್ಪರ್ಶಿಯಾಗಿ ನಿತ್ಯ ಸಮಾಜವನ್ನು ಕಟ್ಟಬಲ್ಲ ಒಂದು ಸಂದೇಶವಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡುವಿನ ಭುಜಂಗ ಪಾರ್ಕ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಹಾಲುಮತ ಮಹಾಸಭಾ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನಕದಾಸ ಜಯಂತಿ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಉಡುಪಿ ಹಾಗೂ ಕನಕನಿಗೂ ಬಹು ದೊಡ್ಡ ಭಾವನಾತ್ಮಕ ಸಂಬAಧವಿದ್ದು, ದೇವರು ಮತ್ತು ಭಕ್ತನ ನಡುವೇ ಅಸಮಾನತೆಗೆ ಯಾವುದೇ ಸ್ಥಾನವಿಲ್ಲ ಭಕ್ತಿಯೇ ಪ್ರಧಾನವಾಗಿರುತ್ತದೆ ಎಂಬುದನ್ನು ಶ್ರೀಕೃಷ್ಣನು ಕನಕನ ಮೂಲಕ ಜಗತ್ತಿಗೇ ಸಾರಿದನು ಎಂಬುವುದು ಕನಕನ ಕಿಂಡಿಯ ಒಂದು ವಿಶೇಷತೆಯಾಗಿದೆ ಎಂದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶ ಕಂಡ ಶ್ರೇಷ್ಠ ಸಂತರಲ್ಲಿ ಕನಕದಾಸರು ಒಬ್ಬರು. ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕೀರ್ತನೆಗಳ ಮೂಲಕ ದೇವರನ್ನು ಕಾಣಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟ ಅವರು ಶ್ರೀಕೃಷ್ಣ ಮಠಕ್ಕೆ ಬಂದ ಸಂದರ್ಭದಲ್ಲಿ ಪ್ರವೇಶ ನಿರಾಕರಿಸಿದಾಗ ಕನಕನ ಭಕ್ತಿಗೆ ಒಲಿದು ಕೃಷ್ಣನೇ ತಿರುಗಿ ದರ್ಶನ ನೀಡಿದ ಪ್ರತೀತಿ ಇದ್ದು, ಕನಕನ ಕಿಂಡಿ ಇಂದಿಗೂ ವಿಶ್ವ ಪ್ರಸಿದ್ದಿ ಹೊಂದಿದೆ ಎಂದರು.

 ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸ ನೀಡಿ ಮಾತನಾಡಿ, ಮಾತಿನಿಂದ ಮಾಡಲು ಸಾಧ್ಯವಿಲ್ಲದ ಕೆಲಸವನ್ನು ಸಂಗೀತ ಮಾಡುತ್ತದೆ. ಕನಕದಾಸರು ಹಾಡಿನ ಮೂಲಕ ಸಮಾಜಕ್ಕೆ ಅನೇಕ ಸಂದೇಶಗಳನ್ನು ನೀಡಿದ್ದಾರೆ. ಕನಕದಾಸರ ಕೀರ್ತನೆ ಹಾಗೂ ಮೌಲ್ಯಗಳು ಬದುಕಿಗೆ ದಾರಿ ದೀಪವಾಗಿದ್ದು, ಪ್ರತಿಯೊಬ್ಬರು ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು,

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕನಕದಾಸ ಸಮಾಜ ಸಂಘದ ಜಿಲ್ಲಾ ಅಧ್ಯಕ್ಷ ಹನುಮಂತ ಡೊಳ್ಳಿನ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಬಸವರಾಜ್ ವೈ. ಕುರುಬರ, ಹಾಲುಮತ ಮಹಾ ಸಭಾದ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೆಚ್ ಐಹೊಳೆ, ಸಮಾಜದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕಟೀಲು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರದೀಪ್ ಡಿ.ಎಂ. ಹಾವಂಜೆ ನಿರೂಪಿಸಿ ವಂದಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!