BREAKING
ಸಂಘ ಸಂಸ್ಥೆ

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ದಾವಣಗೆರೆಯ ಶ್ರೀ ಶಾಮನೂರು ಶಿವಶಂಕರಪ್ಪ ಸಭಾಭವನದಲ್ಲಿ ನವೆಂಬರ್ 22 ಶುಕ್ರವಾರದಂದು ಜರುಗಿದ ಸಹಕಾರ ಭಾರತಿಯ 7ನೇ ರಾಜ್ಯ ಅಧಿವೇಶನದಲ್ಲಿ ಸಾಣೂರು ನರಸಿಂಹ ಕಾಮತ್ ರವರನ್ನು ಮುಂದಿನ ಮೂರು ವರ್ಷದ ಅವಧಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಸರ್ವಾನುಮತದಿಂದ ಆರಿಸಲಾಯಿತು.

ಚುನಾವಣಾ ಅಧಿಕಾರಿಯಾಗಿದ್ದ ಹಿರಿಯ ಸಹಕಾರಿ ಬಾಗಲಕೋಟೆಯ ಶ್ರೀ ಜಿ ಎನ್ ಪಾಟೀಲ್ ರವರು ಈ ಆಯ್ಕೆಯನ್ನು ಘೋಷಿಸಿದರು.

ನಿರ್ಗಮನ ಪ್ರಧಾನ ಕಾರ್ಯದರ್ಶಿ ಉತ್ತರ ಕನ್ನಡ ಜಿಲ್ಲಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಶ್ರೀ ಮೋಹನ್ ದಾಸ್ ನಾಯಕರವರು ಸಹಕಾರಿ ಧ್ವಜವನ್ನು ಹಸ್ತಾಂತರಿಸುವುದರ ಮೂಲಕ ಜವಾಬ್ದಾರಿಯ ವರ್ಗಾವಣೆ ಮಾಡಿದರು.

ಈ ಸಂದರ್ಭದಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಸಂಜಯ ಪಾಚ್ಪುರೆ, ರಾಷ್ಟ್ರೀಯ ಸಂರಕ್ಷಕರಾದ ಕೊಪ್ಪಳದ ಶ್ರೀ ರಮೇಶ್ ವೈದ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹರಾದ ಶ್ರೀ ಪಟ್ಟಾಭಿರಾಮ ಮತ್ತೂರು, ಉತ್ತರ ಪ್ರಾಂತ ಸಂಘದ ಹಿರಿಯರಾದ ಶ್ರೀ ಅರವಿಂದ ದೇಶಪಾಂಡೆ, ಹುಬ್ಬಳ್ಳಿ ನಿರ್ಗಮನ ಅಧ್ಯಕ್ಷರಾದ ಬಾಗಲಕೋಟೆಯ ಶ್ರೀ ರಾಜಶೇಖರ ಶೀಲವಂತ, ನೂತನ ಅಧ್ಯಕ್ಷರಾದ ದಾವಣಗೆರೆಯ ಶ್ರೀ ಪ್ರಭುದೇವ ಆರ್ ಎಂ, ರಾಯಚೂರು ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ವಿಶ್ವನಾಥ ಪಾಟೀಲ್ ಉಪಸ್ಥಿತರಿದ್ದರು.

 ಕೆಎಂಎಫ್ ಮಂಗಳೂರು ಮತ್ತು ಭಾರತಿ ಟೂರಿಸಂ ಡೆವಲಪ್ಮೆಂಟ್ ಕೋ_ ಆಪರೇಟಿವ್ ನ ನಿರ್ದೇಶಕರಾಗಿರುವ ಸಾಣೂರುನರಸಿಂಹ ಕಾಮತ್ ರವರು ಕಳೆದ ಎರಡು ದಶಕಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಸಹಕಾರ ಭಾರತಿಯ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯ ತಜ್ಞರಾಗಿರುವ ಇವರು ಸಾಣೂರು ಗ್ರಾಮ ಪಂಚಾಯತ್ ನಲ್ಲಿ ಎರಡು ಅವಧಿಗೆ ಅಧ್ಯಕ್ಷರಾಗಿದ್ದು ಅಂತರಾಷ್ಟ್ರೀಯ ಗೂಗಲ್ ಗ್ರಾಮ ಪಂಚಾಯತ್ ಪುರಸ್ಕಾರ ಮತ್ತು ರಾಷ್ಟ್ರಪತಿಗಳ ನಿರ್ಮಲ ಗ್ರಾಮ ಪುರಸ್ಕಾರವನ್ನು ಪಡೆದಿದ್ದರು.

ಪ್ರಶಿಕ್ಷಣ ಮತ್ತು ಪಂಚಾಯತ್ ರಾಜ್ ಪ್ರಕೋಷ್ಟಗಳಲ್ಲಿ ಜಿಲ್ಲೆ ಮತ್ತು ರಾಜ್ಯಮಟ್ಟಗಳ ಜವಾಬ್ದಾರಿಯನ್ನು ನಿರ್ವಹಣೆ ಮಾಡಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!