BREAKING
ಶಿಕ್ಷಣ

​ಎಬಿವಿಬಿ :ಕುಲಪತಿಗಳ ಭೇಟಿ~ ವಿವಿಯ ವಿವಿಧ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚೆ

 

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗದ ನಿಯೋಗವು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಭೇಟಿ ಮಾಡಿ ವಿವಿಯ ವಿವಿಧ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಇದನ್ನು ಬಗೆಹರಿಸುವಂತೆ ಆಗ್ರಹಿಸಿ ತಪ್ಪಿದ್ದಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು. 


ಪ್ರಸಕ್ತ ಸಾಲಿನಲ್ಲಿ ವಿವಿಯು ಪರೀಕ್ಷಾ ಶುಲ್ಕವನ್ನು ಏಕಾಏಕಿ 50-60% ದಷ್ಟು ಏರಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹಣದ ಬರೆಯನ್ನು ಎಳೆದಿದ್ದಾರೆ. ಇದಲ್ಲದೆ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಕರ ಕೊರತೆ, ಅಂಕಪಟ್ಟಿ ಕುರಿತು ಇರುವಂತಹ UUCMS ನ ತಾಂತ್ರಿಕ ಸಮಸ್ಯೆಗಳು ಹಾಗೂ ಇತರ ಮೂಲಭೂತ ಸಮಸ್ಯೆಗಳು ವಿವಿಯನ್ನು ಸಮಸ್ಯೆಯ ಗೂಡಾಗಿ ಪರಿವರ್ತಿಸಿದೆ. 


ಈ ಎಲ್ಲಾ ಸಮಸ್ಯೆಗಳನ್ನು ಆಲಿಸಿದ ಕುಲಪತಿಗಳು ಇದಕ್ಕೆಲ್ಲ ಕಾರಣ ಕಳೆದ 6 ವರ್ಷಗಳಿಂದ ವಿಶ್ವವಿದ್ಯಾಲಯಕ್ಕೆ ಸರ್ಕಾರದಿಂದ ಯಾವುದೇ ರೀತಿಯ ಧನ ಸಹಾಯ ಬಾರದೆ ಇರುವುದು ಇದರಿಂದಾಗಿ ಬೇರೆ ಯಾವುದೇ ದಾರಿ ಇಲ್ಲದೆ ವಿದ್ಯಾರ್ಥಿಗಳ ಮೂಲಕವೇ ಶುಲ್ಕವನ್ನು ಪಡೆದು ವ್ಯವಸ್ಥೆಯನ್ನು ಕಲ್ಪಿಸುವ ಪರಿಸ್ಥಿತಿ ಬಂದಿದೆ ಇದರಿಂದಾಗಿ ಎಲ್ಲಾ ಅಗತ್ಯತೆಗಳನ್ನು ಸರಿಯಾಗಿ ಪೂರೈಸಲು ಕಷ್ಟ ಸಾಧ್ಯವಾಗುತ್ತಿದೆ ಎಂದು ತಮ್ಮ ಸ್ಥಿತಿಯನ್ನು ಹೇಳಿಕೊಂಡರು.


ಈ ಸಂದರ್ಭ ಎಬಿವಿಪಿ ವಿಭಾಗ ಸಂಚಾಲಕರಾದ ಗಣೇಶ್ ಪೂಜಾರಿ, ವಿಭಾಗ ಸಂಘಟನಾ ಕಾರ್ಯ ದರ್ಶಿ ಚಂದ್ರಶೇಖರ್, ಮಹಾನಗರ ಕಾರ್ಯದರ್ಶಿ ಮೊನಿಶ್, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಿತೇಶ್ ಹಾಗೂ ಪ್ರಮುಖರಾದ ಹರ್ಷ ಮತ್ತಿತರರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!