BREAKING
ಶಿಕ್ಷಣ

ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ- ಡಾ. ಕೆ. ವಿದ್ಯಾಕುಮಾರಿ


ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರ ಉದ್ಘಾಟಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ

ಐಎಎಸ್, ಐಪಿಎಸ್ ಪರೀಕ್ಷೆ ಬರೆಯುವ ಪ್ರತಿಜ್ಞೆ ಸ್ವೀಕರಿಸಿ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು, ಸಾಧಿಸುವ ಛಲ, ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ, ನಮ್ಮ ವ್ಯಕ್ತಿತ್ವವನ್ನು ರೂಪಿಸಿ ಕೊಂಡು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಇದು ಪ್ರೇರಣೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ರೇಂಜರ್ಸ್ ಘಟಕಗಳ ಸಹಯೋಗದಲ್ಲಿ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಇಂದು ಆಯೋಜಿಸಿದ ಜಿಲ್ಲಾಮಟ್ಟದ ರೇಂಜರ್ ಗಳ ಪ್ರೇರಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಮಕ್ಕಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ. ಜಿಲ್ಲೆಯಲ್ಲಿ ಐಎಎಸ್, ಐಪಿಎಸ್ ಪರೀಕ್ಷೆ ಬರೆಯುವವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಕನಿಷ್ಟ ಐದು ಮಂದಿಯಾದರೂ ಐಎಎಸ್, ಐಪಿಎಸ್ ಪರೀಕ್ಷೆ ಬರೆದು ತೇರ್ಗಡೆಯಾಗುವ ಛಲ ಹೊಂದಬೇಕು. ಆ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದರು.

ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ಕೆ. ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ಜಿಲ್ಲಾ ಸ್ಕೌಟ್ಸ್ ಆಯುಕ್ತ ಜನಾರ್ದನ ಕೊಡವೂರು, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ. ಪೈ,  ಜಿಲ್ಲಾ ಕಾರ್ಯದರ್ಶಿ ಆನಂದ ಟಿ. ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಶಿಬಿರ ನಾಯಕಿ ಜ್ಯೋತಿ ಲಕ್ಷಣ್ ರಾವ್ ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!