Header Ads Widget

ಬೆಳ್ತಂಗಡಿ : ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಕಾಲೇಜು ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.

‌ಮಿತ್ತಬಾಗಿಲು ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಋಶ್ವಿ(17) ಸಾವಿಗೆ ಶರಣಾದವಳು. ಋಶ್ವಿ ಸ್ಥಳೀಯ ಕಾಲೇಜು ಒಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಎರಡು ದಿನಗಳ ಹಿಂದೆ ವಿಷ ಸೇವನೆ ಮಾಡಿದ್ದು ಗಂಭೀರ ಸ್ಥಿತಿಗೆ ಒಳಗಾಗಿದ್ದು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಋತ್ವಿ ಅವರು ಸಾವನ್ನಪ್ಪಿದ್ದಾಳೆ. ಋಶ್ವಿ ಜೀವಾಂತ್ಯಕ್ಕೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.