BREAKING

ಉಡುಪಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024- 25



ಉಡುಪಿ ಜಿಲ್ಲಾ ಪಂಚಾಯತ್-ಶಾಲಾ ಶಿಕ್ಷಣ ಇಲಾಖೆ ಉಡುಪಿ - ಕ್ಷೇತ್ರ ಶಿಕ್ಷಾಧಿಕಾರಿಯವರ ಕಚೇರಿ - ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಮತ್ತು ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆ ಒಳಕಾಡು ಇದರ ಸಂಯುಕ್ತ ಆಶ್ರಯದಲ್ಲಿ  ಉಡುಪಿ ವಲಯ ಮಟ್ಟದ ಪ್ರಾರ್ಥಮಿಕ ಹಾಗು ಪ್ರೌಢ ಶಾಲಾ ವಿಭಾಗದ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2024-25, ದಿನಾಂಕ 22.11.2024ನೇ ಶುಕ್ರವಾರದಂದು ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆ ಒಳಕಾಡು ಇಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಉಧ್ಘಾಟನೆಯನ್ನು ಕರ್ನಾಟಕ ಸರಕಾರದ ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು  ಹಾಗೂ ವಿಕಲಚೇತನರ ಹಾಗೂ  ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಇವರು ನಡೆಸಿಕೊಡುವವರಿದ್ದಾರೆ.

ಈ ಕಾರ್ಯಕ್ರಮಕ್ಕೆ ಘನ ಉಪಸ್ಥಿತರಾಗಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರೂ ಆಗಿರುವ ಶ್ರೀ ಎಸ್. ಮಧು ಬಂಗಾರಪ್ಪ  ಇವರು ವಹಿಸಲಿದ್ದಾರೆ

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ಯಶಪಾಲ್ ಸುವರ್ಣ ವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ಗುರ್ಮೆ ಸುರೇಶ ಶೆಟ್ಟಿ, ವಿಧಾನ ಪರಿಷತ್ ಶಾಸಕರಾಗಿರುವ ಶ್ರೀ ಎಸ್ ಎಲ್ ಭೋಜೇಗೌಡ, ಶ್ರೀ ಮಂಜುನಾಥ್ ಭಂಡಾರಿ, ಡಾ | ಧನಂಜಯ ಸರ್ಜಿ, ಶ್ರೀ ಕಿಶೋರ್ ಕುಮಾರ್ ಪುತ್ತ್ತೂರು, ಉಡುಪಿ ನಗರಸಭಾ ಅಧ್ಯಕ್ಷರಾಗಿರುವ ಶ್ರೀ ಪ್ರಭಾಕರ್ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಶ್ರೀ ದಿನಕರ್ ಹೇರೂರು, ಕರ್ನಾಟಕ ಸರಕಾರದ ಕಾರ್ಯದರ್ಶಿ (ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ) ಬೆಂಗಳೂರು ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿರುವ ಶ್ರೀಮತಿ ಜಿ. ಸತ್ಯವತಿ, ಉಡುಪಿ ಜಿಲ್ಲಾಧಿಕಾರಿ ಡಾ|ಕೆ. ವಿದ್ಯಾಕುಮಾರಿ, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶ್ರೀ ಪ್ರತೀಕ್ ಬಾಯಲ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿರುವ ಶ್ರೀ ಅರುಣ್ ಕೆ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕರಾಗಿರುವ ಶ್ರೀ ಗಣಪತಿ ಕೆ. ಹಾಗು ಉಡುಪಿ ಡಯಟ್ ನ ಅಭಿವೃದ್ಧಿ ಉಪನಿರ್ದೇಶಕರಾಗಿರುವ ಶ್ರೀ ಗೋವಿಂದ ಮಡಿವಾಳ ಇವರು ಭಾಗವಹಿಸಲಿದ್ದಾರೆ.
 
ಈ ಕಾರ್ಯಕ್ರಮಕ್ಕೆ ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ | ಯಲ್ಲಮ್ಮ ಹಾಗೂ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗ, ಮತ್ತು  ಸರಕಾರಿ ಮಾದರಿ ಹಿರಿಯ ಪ್ರಾರ್ಥಮಿಕ ಶಾಲೆ ಒಳಕಾಡು (ಪ್ರಾರ್ಥಮಿಕ ಮತ್ತು ಪ್ರೌಢಶಾಲಾ ವಿಭಾಗ) ಸರ್ವರಿಗೂ ಸ್ವಾಗತವನ್ನು ಬಯಸುತ್ತದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ​


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!