ಉಡುಪಿ: ವಿಶ್ವನಾಥ್ ಶೆಣೈ ಅವರಿಂದ ಉಡುಪಿ ಪತ್ರಕರ್ತರ ಸಂಘಕ್ಕೆ ದೇಣಿಗೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನದಲ್ಲಿರುವ ಉಡುಪಿ ಪತ್ರಿಕಾ ಭವನದ ಅಭಿವೃದ್ಧಿ ಕಾರ್ಯಗಳಿಗೆ ಉಡುಪಿ ವಿಶ್ವ ಸಂಸ್ಕೃತಿ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ ಶೆಣೈ ದೊಡ್ಡ ಮೊತ್ತದ ದೇಣಿಗೆಯನ್ನು ನೀಡಿದರು.

ಉಡುಪಿ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿಶ್ವನಾಥ್ ಶೆಣೈ, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ ಅವರಿಗೆ ಚೆಕ್ ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಉಡುಪಿ ಪಿತ್ರೋಡಿ ಯಶಸ್ವಿ ಫಿಶ್‌ಮಿಲ್ನ ನಿರ್ದೇಶಕ ಉದಯ ಕುಮಾರ್, ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜನಾರ್ದನ ಕೊಡವೂರು ಉಪಸ್ಥಿತರಿದ್ದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು