ಮಂಗಳೂರು ನಗರದ ಲೇಡಿಹಿಲ್ ಬಳಿ ಶನಿವಾರ ಸಂಜೆ(ಜ4) ಚಲಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ.
ಅದೃಷ್ಟವಶಾತ್ ಕಾರಿನಲ್ಲಿ ಚಾಲಕ ಒಬ್ಬನೇ ಇದ್ದಿದ್ದು, ಸಮಯಕ್ಕೆ ಸರಿಯಾಗಿ ಬೆಂಕಿಯನ್ನು ಗಮನಿಸಿ ಸುರಕ್ಷಿತವಾಗಿ ಕಾರಿನಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ.
ತುರ್ತು ಸೇವೆಗಳಿಗೆ ಕರೆ ಮಾಡಿ ಬೆಂಕಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಲಾಯಿತು. ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ.ಬೆಂಕಿ ಕಾಣಿಸಿಕೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ.
0 ಕಾಮೆಂಟ್‌ಗಳು