BREAKING
ಸುದ್ದಿ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ 2025

ದಿನಾಂಕ: 24.01.2025 ರಂದು ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಕಛೇರಿಯ ಹೆಣ್ಣು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಿ ಬಹುಮಾನ ನೀಡುವುದರ ಜೊತೆಗೆ ಎಲ್ಲಾ ಹೆಣ್ಣು ಮಕ್ಕಳಿಗೆ ಉಡುಗೊರೆಯನ್ನು ನೀಡಿ ವಿಶೇಷ ರೀತಿಯಲ್ಲಿ ಗೌರವಿಸುವ ಮೂಲಕ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷರಾಗಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ನಾಗರತ್ನ ಇವರು ಹೆಣ್ಣುಮಕ್ಕಳ ಪ್ರಾಮುಖ್ಯತೆ ಬಗ್ಗೆ ಮಾತನಾಡಿ ಎಲ್ಲಾ ಮಹಿಳಾ ಸಿಬ್ಬಂದಿಗಳಿಗೆ ಶುಭ ಕೋರಿದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ ಶ್ರೀರಾಮ ರಾವ್.ಕೆ ಇವರು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಆತ್ಮಸ್ಥೈರ್ಯದಿಂದ ಬದುಕಲು ಮಾನಸಿಕವಾಗಿ ಸದೃಢವಾಗಿರುವಂತೆ ಬೆಳೆಸಬೇಕೆಂದು ಕೋರಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ದೀಪಾ ಕೆ ಶೆಟ್ಟಿ ನ್ಯಾಯವಾದಿಗಳು, ಉಡುಪಿ ಜಿಲ್ಲೆ, ಇವರು ಹೆಣ್ಣು ಮಕ್ಕಳ ರಕ್ಷಣೆಗಾಗಿ ಇರುವ ಕಾನೂನುಗಳು ಮತ್ತು ಖಾಯ್ದೆಗಳ ಬಗ್ಗೆ ಸವಿವರವಾಗಿ ತಿಳಿಸಿದರು.

ಜಿಲ್ಲಾ ಕುಷ್ಟರೋಗ ನಿವಾರಣಾಗಿಗಳು ಡಾ ಲತಾ ನಾಯಕ್ ಇವರು ಮಾತನಾಡಿ ಮನೆಯಲ್ಲಿ ಹೆಣ್ಣು ಮಕ್ಕಳಿಗೆ ಮಾತ್ರ ಉತ್ತಮ ನಡವಳಿಕೆಗಳ ಬಗ್ಗೆ ತಿಳುವಳಿಕೆ ನೀಡುವುದು ಮಾತ್ರವಲ್ಲ ಮನೆಯ ಗಂಡು ಮಕ್ಕಳಿಗೂ ಸಹ ಆರಂಭದಿಂದಲೂ ಉತ್ತಮ ಸಂಸ್ಕಾರವನ್ನು, ತಿಳುವಳಿಕೆ ಮತ್ತು ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಗೌರವ ಹಾಗೂ ರಕ್ಷಣೆ ನೀಡುವುದರ ಬಗ್ಗೆ ತಿಳಿಹೇಳಲು ಪೋಷಕರಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ ಜ್ಯೋತ್ಸ್ನಾ ಬಿ.ಕೆ ಹಾಗೂ ಕಚೇರಿಯ ಅಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಆರೋಗ್ಯ ಶಿಕ್ಷಣಾಧಿಕಾರಿಯಾದ ಶ್ರೀಮತಿ ಚಂದ್ರಕಲಾ ನಿರೂಪಿಸಿದರು ಹಾಗೂ ಶ್ರೀ ಶಶಿಧರ್ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಇವರು ಸ್ವಾಗತಿಸಿ ವಂದಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!