BREAKING
ಕರಾವಳಿ

ಜಿಲ್ಲಾಧಿಕಾರಿಯವರಿಂದ ಕೋಟದಲ್ಲಿ ಕಲೋತ್ಸವ ಉದ್ಘಾಟನೆ

“ಇಂದಿನ ಕಾಲ ಘಟ್ಟದಲ್ಲಿ ಯುವ ಜನತೆ ಕಲೆ ಸಾಹಿತ್ಯದತ್ತ ಆಸಕ್ತಿವಹಿಸಬೇಕಾದ ಅಗತ್ಯವಿದೆ. ಮಕ್ಕಳಲ್ಲಿ ಬಿತ್ತಿದ ಬೀಜ ಮುಂದೆ ಒಳ್ಳೆಯ ಬೆಳೆಯಾಗಿ ಬೆಳೆಯಲಿದೆ. ಸಾಲಿಗ್ರಾಮ ಮಕ್ಕಳ ಮೇಳ ಸುಮಾರು ಐವತ್ತು ವರ್ಷಗಳಿಂದ ಕೋಟ ಪರಿಸರದ ಮಕ್ಕಳಿಗೆ ಒಳ್ಳೆಯ ವೇದಿಕೆಯನ್ನು ಒದಗಿಸಿಕೊಟ್ಟಿರುವುದು ಅಭಿನಂದನೀಯ. ಎರಡು ದಿನಗಳ ಕಲೋತ್ಸವ ಯಶಸ್ವಿಯಾಗಲಿ” ಎಂದು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿಯವರು ಹೇಳಿದರು.

ಕೋಟ ಪಟೇಲರ ಮನೆಯಲ್ಲಿ ಆಯೋಜಿಸಿದ ಐವತ್ತರ ಸಂಭ್ರಮವನ್ನು ಆಚರಿಸುತ್ತಿರುವ ಸಾಲಿಗ್ರಾಮ ಮಕ್ಕಳ ಮೇಳದ ಸುವರ್ಣ ಪರ್ವ-೬ರ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣೆ, ಹಂದೆ ಉಡುಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಕಲೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟಿçÃಯ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ ಅವರಿಗೆ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕರಲ್ಲೋರ್ವರಾದ ಎಚ್. ಶ್ರೀಧರ ಹಂದೆಯವರ ಹೆಸರಿನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಮಕ್ಕಳ ಮೇಳದ ಅಧ್ಯಕ್ಷ ಬಲರಾಮ ಕಲ್ಕೂರ ಅಧ್ಯಕ್ಷತೆವಹಿಸಿದ್ದರು. ಯಕ್ಷ ವಿದ್ವಾಂಸ ಡಾ ಎಂ. ಪ್ರಭಾಕರ ಜೋಷಿ, ಉದ್ಯಮಿಗಳಾದ ಬೆಳ್ವೆ ಗಣೇಶ್ ಕಿಣಿ, ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ ಕಲ್ಕೂರ, ಹಂಗಾರಕಟ್ಟೆಯ ಸಾಮಾಜಿಕ ಶೈಕ್ಷಣಿಕ ಚಿಂತಕ ಇಬ್ರಾಹಿಂ ಸಾಹೇಬ್, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್, ಕೋಟ ವಿದ್ಯಾ ಸಂಘದ ಕಾರ್ಯದರ್ಶಿ ಎಂ. ರಾಮದೇವ ಐತಾಳ, ಬುರಾಕೋ ಗ್ಯಾಸಸ್‌ನ ನಿವೃತ್ತ ಮ್ಯಾನೆಜರ್ ಬೆಂಗಳೂರಿನ ಶಂಕರನಾರಾಯಣ ಹೆಬ್ಬಾರ್, ಮಕ್ಕಳ ಮೇಳದ ಕಾರ್ಯಾಧ್ಯಕ್ಷ ಮಹೇಶ ಉಡುಪ, ಎಚ್. ಶ್ರೀಧರ ಹಂದೆ, ಉಪಾಧ್ಯಕ್ಷ ಜನಾರ್ದನ ಹಂದೆ, ಶಿಕ್ಷಕಿ ವಿನಿತ ಮೊದಲಾದ ಗಣ್ಯರು ಉಪಸ್ಥಿತರಿದ್ದರು. 

ಕಾರ್ಯದರ್ಶಿ ಸುಜಯಿಂದ್ರ ಹಂದೆ ಸ್ವಾಗತಿಸಿದರು. ಅಭಿಲಾಷ ಅಭಿನಂದನೆಯ ಮಾತುಗಳನ್ನಾಡಿದರು. ಪೂರ್ಣಿಮಾ ವಂದಿಸಿದರು. ಕುಮಾರಿ ಕಾವ್ಯ ನಿರ್ವಹಿಸಿದರು.

ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಇಲ್ಲಿನ ಕಲಾವಿದರಿಂದ ಯಕ್ಷ ಗಾನ ವೈವಿಧ್ಯ, ಹಂದೆ ಕುಟುಂಬದ ಸದಸ್ಯರಿಂದ ಕಲಾ ಸಾಹಿತ್ಯ ಸಡಗರ ಕಾರ್ಯಕ್ರಮ ನಡೆಯಿತು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!