BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಅಭಿವೃದ್ದಿ ಪರ,ಜನಪರ ಬಜೆಟ್~ ರಮೇಶ್ ಕಾಂಚನ್

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ತನ್ನ ದಾಖಲೆಯ 16ನೇ ಬಜೆಟ್ ಸರ್ವ ಜನರಿಗೆ ಸಮಪಾಲು ಸಮಬಾಳು ನೀಡುವುದಾಗಿದೆ. ಗ್ಯಾರಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಮೀಸಲಿಡುವುದರ ಮೂಲಕ ವಿರೋಧ ಪಕ್ಷಗಳ ಹೇಳಿಕೆಗಳು ಸುಳ್ಳು ಎನ್ನುವುದನ್ನು ಸಾಬೀತುಪಡಿಸಿದ್ದಾರೆ, ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಎಲ್ಲರನ್ನೂ ಒಳಗೊಂಡ ಸಮಗ್ರ ವಾದ ಬಜೆಟ್ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.


ಕರಾವಳಿಗೆ ಹಾಗೂ ಮೀನುಗಾರ ಸಮುದಾಯಕ್ಕೆ ಭರ್ಜರಿ ಯೋಜನೆಗಳನ್ನು ನೀಡಿರುವ ಸಿದ್ದ ರಾಮಯ್ಯ ಅವರು ಮಲ್ಪೆಯಲ್ಲಿ ಮಲ್ಟಿಲೆವೆಲ್ ಪಾರ್ಕಿಂಗ್ ವ್ಯವಸ್ಥೆ, ಮೀನುಗಾರಿಕಾ ನೀತಿ ಜಾರಿಗೆ ಪ್ರಯತ್ನ, ಮೀನುಗಾರಿಕಾ ರಸ್ತೆಗಳ ಅಭಿವೃದ್ಧಿ, ಕಡಲ ತೀರದ ಅಭಿವೃದ್ಧಿ, ರಸ್ತೆ ಬದಲಿ ಸೌಲಭ್ಯಗಳ ಉನ್ನತೀಕರಣ, ಉಡುಪಿ ಜಿಲ್ಲಾ ಕ್ರೀಡಾಂಗಣಕ್ಕೆ ಅನುದಾನ, ಸಮುದ್ರ ಕೊರೆತ ತಡೆಗಟ್ಟುವಿಕೆಗೆ ರೂ 200 ಕೋಟಿ ಅನುದಾನ ಸೇರಿದಂತೆ ಹಲವಾರು ಬಂಪರ್ ಯೋಜನೆಗಳನ್ನು ಘೋಷಣೆ ಮಾಡಿರುತ್ತಾರೆ


 ರಾಜ್ಯಾದ್ಯಂತ ಅಕ್ಕ ಕೆಫೆ ಮತ್ತು ಅಕ್ಕ ಸಹಕಾರಿ ಸಂಘಗಳನ್ನು ಸ್ಥಾಪಿಸಲು, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಅಕ್ಕ ಕೆಫೆ ಸ್ಥಾಪನೆಯಾಗಲಿದೆ. ಅಂಗನವಾಡಿ ಕಾರ್ಯಕರ್ತೆ ಯರ ಮಾಸಿಕ ಗೌರವಧನ 1 ಸಾವಿರ ರೂ. ಹಾಗೂ ಸಹಾಯಕಿಯರ ಮಾಸಿಕ ಗೌರವಧನ 750 ರೂ,ಗೆ ಹೆಚ್ಚಿಸುವ ಭರವಸೆಯನ್ನು ಬಜೆಟ್ ನಲ್ಲಿ ನೀಡಿದ್ದಾರೆ.


 ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನವನ್ನು ಹೆಚ್ಚಿಸುವುದಾಗಿ ಕರ್ನಾಟಕದ ಮುಖ್ಯಮಂತ್ರಿಗಳು ರಾಜ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಬಿಸಿಯೂಟ ಸಿಬ್ಬಂದಿಗೂ ವೇತನ ಏರಿಕೆ ಆಗಲಿದೆ. ಹೆಚ್ಚುವರಿಯಾಗಿ, 100 ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿಯೂ, 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿಯೂ ಉನ್ನತೀಕರಿಸಲಾಗುವುದು ಎಂದು ಘೋಷಿಸಿದ್ದಾರೆ. ಶಾಲಾ ಮಕ್ಕಳಿಗೆ  ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ ಜಿ ಇವರ ಸಂಸ್ಥೆಯ ಸಹಯೋಗದಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ .


ಧಾರ್ಮಿಕ ದತ್ತಿ ಇಲಾಖೆಯ  ಅರ್ಚಕರಿಗೆ ನೀಡುತ್ತಿರುವ ತಸ್ತೀಕ್ ನ್ನು 60 ಸಾವಿರ ರೂ.ನಿಂದ 72 ಸಾವಿರಕ್ಕೆ  ಏರಿಸಲಾಗಿದೆ ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ ವ್ಯವಸ್ಥೆಯ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡ ಲಾಗಿದೆ


ಒಟ್ಟಾರೆಯಾಗಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಜನಸ್ನೇಹಿಯಾಗಿದ್ದು ಸರ್ವ ವರ್ಗದ ಜನತೆಯ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ಮತ್ತೊಮ್ಮೆ ಜನಪರ ಮುಖ್ಯಮಂತ್ರಿ ಎನ್ನುವುದನ್ನು ಸಾಬೀತುಪಡಿಸಿದ್ದಾರೆ.ಅದಕ್ಕಾಗಿ ರಾಜ್ಯದ ಸಮಸ್ತ ಜನತೆಯ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಿಗೆ ಅಭಿನಂದನೆ ಸಲ್ಲಿಸುವುದಾಗಿ ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!