BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಅಪರಾಧ

ಬೆಂಗಳೂರು: ಪತ್ನಿಯನ್ನು ಭೀಕರವಾಗಿ ಹತ್ಯೆಗೈದು ಸೂಟ್ ಕೇಸ್ ನಲ್ಲಿ ತುಂಬಿದ ಪತಿ..!

 

ಬೆಂಗಳೂರು: ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಪತಿಯೇ ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್‌ಗೆ ತುಂಬಿರುವ ಭೀಕರ ಘಟನೆ ಸಂಭವಿಸಿದೆ.


ಆರೋಪಿ ಪತಿ ರಾಕೇಶ್ ಎಂಬಾತ ಮಹಾರಾಷ್ಟ್ರ ಮೂಲದವನಾಗಿದ್ದು ಪತ್ನಿ ಗೌರಿ ಅನಿಲ್ ಸಾಂಬೆಕರ್(32)ರನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ಹೇಳಿದ್ದು, ಪೋಷಕರು ಮಹಾರಾಷ್ಟ್ರ ಪೊಲೀಸರ ನೆರವು ಕೋರಿದ್ದಾರೆ.


ರಾಕೇಶ್ ಹಾಗೂ ಗೌರಿ 2 ವರ್ಷಗಳ ಹಿಂದೆ ಮದುವೆಯಾಗಿದ್ದು ಒಂದು ತಿಂಗಳ ಹಿಂದಷ್ಟೆ ದೊಡ್ಡಕಮ್ಮನಹಳ್ಳಿಯಲ್ಲಿ ಮನೆ ಪಡೆದು ವಾಸವಿದ್ದರು. ಇಬ್ಬರೂ ಸಹ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಪ್ರಸ್ತುತ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.


ಮಹಾರಾಷ್ಟ್ರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮನೆಯ ಬಾತ್ ರೂಮ್‌ನಲ್ಲಿ ಸೂಟ್ ಕೇಸ್‌ನಲ್ಲಿ ಗೌರಿಯ ಮೃತದೇಹ ಪತ್ತೆಯಾಗಿದ್ದು ಆರೋಪಿ ರಾಕೇಶ್ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!