BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಖುಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ​~ ಹೆಚ್ ಡುಂಡಿರಾಜ್

ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ​ಡುಂಡಿರಾಜ್ ಹೇಳಿದರು 


ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​ ಉಡುಪಿ ತಾಲೂಕು ಘಟಕ, ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ ಹೋ​ಮ್ ಸ್ಟೇ ಆವರಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. 


ಸಹಜವಾಗಿ ಬರೆದರೆ ಅದು ಕಾವ್ಯ ಮಯ, ಯಾರದೋ ಒತ್ತಾಯಕ್ಕೆ ಬರೆದರೆ ಕಾವ್ಯ ಮಾಯ , ದೊಡ್ಡ ದೊಡ್ಡ ಶಬ್ದ, ಪ್ರಾಸ, ಛಂದಸ್ಸು, ಲಯಬದ್ಧವಾಗಿ ಬರೆದದ್ದೂ ಕೆಲವೊಮ್ಮೆ ಕವಿತೆಗಳಾಗೋದಿಲ್ಲ. ಕವಿತೆ ಸರಳವಾಗಿದ್ದು ಕೇಳುಗರ, ಓದುಗರ ಗಮನ ಸೆಳೆಯುವಂತಿರಬೇಕು. ಹಾಡು, ನಾಟಕ ಬರೆಯುವವರಿಗೆ ಇಂದು ​ಪ್ರೋತ್ಸಾಹ ವಿರಳವಾಗಿದೆ. ನಳ್ಳಿ ತಿರುಗಿಸಿದರೆ ನೀರು ಬರೋದಿಲ್ಲ. ಆದರೆ ವಾಟ್ಸ್ಯಾಪ್ ಆನ್ ಮಾಡಿದರೆ ನೂರಾರು ಕವಿತೆಗಳು ಬರುತ್ತವೆ​. ಕವಿತೆ ತಪಸ್ಸು,  ಖುಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ಎಂದು ಹೇಳಿದರು.


​ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ​ಪ್ರೊಫಸರ್ ಶಂಕರ್, ಉದ್ಯಮಿ ವಿಶ್ವನಾಥ ಶೆಣೈ, ಲೇಖಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪಸ್ಥಿತರಿದ್ದರು. ಲಹರಿ ಪ್ರಾರ್ಥಿಸಿದರು. ಶಿಲ್ಪಾ ಜೋಶಿ ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ​ ಕಸಾಪ  ಘಟಕ ಅಧ್ಯಕ್ಷ ರವಿರಾಜ​ ಎಚ್. ಪಿ. ಪ್ರಾಸ್ತಾವಿಕ ಮಾತ ನಾಡಿದರು. ಜನಾರ್ದನ ಕೊಡವೂರು ವಂದಿಸಿದರು.




Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!