BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಾಧನೆ

ಕುದ್ರೋಳಿ ಗಣೇಶ್ ಗೆ " ಗೋಲ್ಡನ್ ಮ್ಯಾಜಿಷಿಯನ್" ರಾಷ್ಟ್ರೀಯ ಜಾದೂ ಪ್ರಶಸ್ತಿ

ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ( ಐ ಎಂ ಎ) ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ  ಪ್ರತಿಷ್ಟಿತ  "  ಗೋಲ್ಡನ್ ಮ್ಯಾಜಿಷಿಯನ್ " ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ಸಂದಾಯವಾಗಿದೆ.


ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ನೆನಪಿಗಾಗಿ ನಡೆದ ಅದ್ದೂರಿ ಸಮಾರಂಭದಲ್ಲಿ ವಿಶಾಖಪಟ್ಟಣದ ಲೋಕಸಭಾ ಸದಸ್ಯರಾದ ಶ್ರೀ ಶ್ರೀಭರತ್ ಮುತ್ತುಕುಮುಲಿ ಯವರು ಕುದ್ರೋಳಿ ಗಣೇಶ್ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಐ ಎಂ ಎ ಸಂಸ್ಥೆಯ ಅಧ್ಯಕ್ಷರಾದ ಖ್ಯಾತ ಜಾದೂಗಾರ ಶ್ರೀ ಬಿ.ಎಸ್.ರೆಡ್ಡಿ ಉಪಸ್ಥಿತರಿದ್ದರು.


ಇಂಡಿಯನ್ ಮ್ಯಾಜಿಕ್ ಅಸೋಸಿಯೇಶನ್ ಸಂಸ್ಥೆಯು ತನ್ನ ದಶಮಾನೋತ್ಸದ ಅಂಗವಾಗಿ  ಭಾರತದ ಅಗ್ರಗಣ್ಯ ಜಾದೂಗಾರರಾದ ಶ್ರೀ ಪಿ.ಸಿ.ಸೊರ್ಕಾರ್ ಜೂನಿಯರ್ ಸೇರಿದಂತೆ ದೇಶ ವಿದೇಶದ ಹತ್ತು ಜಾದೂ ಸಾಧಕರಿಗೆ  ಪ್ರಶಸ್ತಿಯನ್ನು ಕೊಡಮಾಡಿದೆ.


ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುದ್ರೋಳಿ ಗಣೇಶ್ ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ  ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೊಣ ಎಂದು ಭಾರತೀಯ ಜಾದೂಗಾರರಿಗೆ ಕರೆ ನೀಡಿದರು. ಜಾದೂ ಕಲೆಯ ಅಭಿವೃದ್ದಿಗಾಗಿ ಜಾದೂ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ, ಈ ಬಗ್ಗೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಕುದ್ರೋಳಿ ಗಣೇಶ್ ಈ ಬಗ್ಗೆ  ತಾವು ಮುಂದಾಳತ್ವವನ್ನು ವಹಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯ ಜಾದೂಗಾರ ಶ್ರೀ ಪಿ.ಸಿ.ಸೊರ್ಕಾರ್ ರವರಿಗೆ  ವಿನಂತಿಸಿದರು.


ಕುದ್ರೋಳಿ ಗಣೇಶ್ ರವರು ಮೂವತ್ತಕ್ಕೂ ಅಧಿಕ ವರ್ಷಗಳಿಂದ ಜಾದೂರಂಗದಲ್ಲಿದ್ದು ದೇಶದಾದ್ಯಂತ ಹಾಗೂ  ವಿದೇಶದ 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ್ದಾರೆ. ವಿವಿಧ ಜಾದೂ ಸ್ಪರ್ಧೆಗಳಲ್ಲಿ ಭಾಗವಹಿಸಿ 11 ರಾಷ್ಟ್ರೀಯ ಜಾದೂ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.


ಜಾದೂ,ಜಾನಪದ,ರಂಗಭೂಮಿ,ಸಂಗೀತಗಳ ಸಮ್ಮಿಳನದ ನವರಸಪೂರ್ಣ ಜಾದೂ ಶೈಲಿಯನ್ನು ಹುಟ್ಟುಹಾಕಿದ್ದಾರೆ. ತುಳುನಾಡು ಜಾದೂ, ತುಳುನಾಡು ತುಡರ್ ಚೆಂಡು,ಹರಿಕಥೆ ಜಾದೂ, ನವದುರ್ಗಾ ವಿಸ್ಮಯ, ಸ್ವಚ್ಛತೆಗಾಗಿ ಜಾದೂ, ಶಿಕ್ಷಣಕ್ಕಾಗಿ ಜಾದೂ, ಮೈಂಡ್ ಮ್ಯಾಜಿಕ್ ಮುಂತಾದ ನವನವೀನ ಜಾದೂ ಪ್ರಯೋಗಗಳ ಮೂಲಕ ಜಗತ್ತಿನಾದ್ಯಂತ ಜನಪ್ರಿಯರಾಗಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!