BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕಲಾಸಂಸ್ಕೃತಿ

ಅಂಬಲಪಾಡಿಯಲ್ಲಿ ಮಕ್ಕಳ ರಂಗ ತರಬೇತಿ ಶಿಬಿರ ಸಂಪನ್ನ

ಉಡುಪಿ : ರಂಗಭೂಮಿ ಚಟುವಟಿಕೆಗಳಿಗೆ ಅಂಬಲಪಾಡಿ ದೇವಳದ ವತಿಯಿಂದ ಧರ್ಮದರ್ಶಿ ಅಣ್ಣಾಜಿ ಬಲ್ಲಾಳರ ಕಾಲದಿಂದಲೂ ಹೆಚ್ಚಿನ ಪ್ರೋತ್ಸಾಹ ನೀಡಲಾಗಿದೆ. ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಲು, ಸಾಮಾಜಿಕ ಮೌಲ್ಯಗಳನ್ನು ಉತ್ತೇಜಿಸಲು ಇಂತಹ ಚಟುವಟಿಕೆಗಳು ಬೇಕು. ಹೆತ್ತವರು ಇಂತಹ ರಂಗಶಿಕ್ಷಣ ಪಡೆಯಲು ಮಕ್ಕಳಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ಎನ್.ಬಿ.ವಿಜಯ ಬಲ್ಲಾಳ್ ಹೇಳಿದರು.

ಅವರು ಭಾನುವಾರ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಏ.12ರಿಂದ 20ರವರೆಗೆ 12ರಿಂದ 15 ವರ್ಷದ ರಂಗಾಸಕ್ತ ಮಕ್ಕಳಿಗಾಗಿ ಖ್ಯಾತ ರಂಗ ನಿರ್ದೇಶಕ ವಿದ್ದು ಉಚ್ಚಿಲ್ ಅವರ ನಿರ್ದೇಶನದಲ್ಲಿ ನಡೆದ 'ರಂಗ ತರಬೇತಿ ಶಿಬಿರ'ದ ಸಮಾರೋಪದಲ್ಲಿ ಮಾತನಾಡಿದರು.

ರಂಗಭೂಮಿ ಉಡುಪಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ರಂಗಭೂಮಿ ಉಡುಪಿ ತನ್ನ 60ನೇ ಸಂಭ್ರಮಾಚರಣೆಯ ಪ್ರಯುಕ್ತ ಪ್ರೌಢಶಾಲಾ ಮಕ್ಕಳಿಗೆ ಹಮ್ಮಿಕೊಂಡ ರಂಗ ಶಿಕ್ಷಣ ಯೋಜನೆಗೆ ಶಿಕ್ಷಣ ಸಂಸ್ಥೆಗಳಿoದ ಅಭೂತಪೂರ್ವ ಬೆಂಬಲ ದೊರೆತಿದೆ. ಈ ಸಾಲಿನಲ್ಲಿ ಈ ಯೋಜನೆಯನ್ನು ಸುಮಾರು 20 ಶಾಲೆಗಳಿಗೆ ವಿಸ್ತರಿಸಲು ಚಿಂತನೆ ನಡೆದಿದೆ ಎಂದರು.

ರAಗಭೂಮಿ ಉಡುಪಿ ಇಂದು ಯಶಸ್ವಿ 60 ವರ್ಷಗಳನ್ನು ಪೂರೈಸಿದೆ. ಈ ಸಂಸ್ಥೆ ಇನ್ನಷ್ಟು ಬೆಳೆಯಲು ರಂಗಭೂಮಿಯನ್ನು ಬೆಳೆಸುವವರು ಬೇಕು. ಹೀಗಾಗಿ ಶಾಲಾ ಮಕ್ಕಳಿಗೆ ರಂಗ ತರಬೇತಿಯನ್ನು ನೀಡಿದರೆ ಅವರು ಭವಿಷ್ಯದ ರಂಗಕರ್ಮಿಗಳಾಗುವ ಸಾಧ್ಯತೆಯಿದೆ. ಪೋಷಕರು ತಮ್ಮ ಮಕ್ಕಳಿಗೆ ರಂಗ ಶಿಕ್ಷಣ, ಯಕ್ಷಗಾನ, ಜಾನಪದ ಮೊದಲಾದ ಕೌಶಲಗಳನ್ನು ಕಲಿಯಲು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಿಬಿರದ ನಿರ್ದೇಶಕ ವಿದ್ದು ಉಚ್ಚಿಲ್ ಮಾತನಾಡಿ, ನಾವು ಬೇರೆ ಬೇರೆ ಕಡೆಗಳಲ್ಲಿ ಹಿರಿಯರ ಮಾರ್ಗದರ್ಶನದಲ್ಲಿ ಮಕ್ಕಳೊಂದಿಗೆ ರಂಗಭೂಮಿ ಚಟುವಟಿಕೆ ಮಾಡಿಕೊಂಡು ಬಂದಿದ್ದೇವೆ. ಎಲ್ಲಿಯೂ ನಾವು ಅವರ ಮೇಲೆ ಒತ್ತಡ ಹಾಕದೆ, ಅವರೊಂದಿಗೆ ಬೆರೆತು ಅವರಲ್ಲಿರುವ ಪ್ರತಿಭೆಯನ್ನು ಹೊರತರಲು ಪ್ರಯತ್ನಿಸಿದ್ದೇವೆ. ಧಾರ್ಮಿಕ ಕ್ಷೇತ್ರಗಳು ಇಂತಹ ಕಾರ್ಯಗಳಿಗೆ ಪ್ರೋತ್ಸಾಹ ನೀಡಿದರೆ ರಂಗಭೂಮಿಗೆ ಹೆಚ್ಚಿನ ಬಲ ತುಂಬಿದoತಾಗುತ್ತದೆ ಎಂದರು.

ರoಗಭೂಮಿ ಉಡುಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಮಕ್ಕಳ ಮನಸ್ಸು ಖಾಲಿ ಹಾಳೆಯಿದ್ದಂತೆ. ಹೀಗಾಗಿ ಅವರಿಗೆ ಸರಿಯಾದ ತಿಳುವಳಿಕೆ, ಜ್ಞಾನ ಕೊಡಬೇಕಾಗುತ್ತದೆ. ಇಲ್ಲಿ ಯಾವುದೇ ಜಾತಿ, ಮತ, ಪಂಥದ ಹಂಗಿಲ್ಲದೆ ಕೇವಲ ನಾಟಕ, ರಂಗಭೂಮಿ ಚಟುವಟಿಕೆಯನ್ನಷ್ಟೇ ಕಲಿಸಲಾಗುತ್ತದೆ. ಈ ಮೂಲಕ ರಂಗಭೂಮಿಗೆ ಮುಂದಿನ ತಲೆಮಾರನ್ನು ಸೃಷ್ಟಿಸುವ ಉದ್ದೇಶಹೊಂದಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಿಬಿರದ ರಂಗನಿರ್ದೇಶಕ ವಿದ್ದು ಉಚ್ಚಿಲ್ ಅವರನ್ನು ಸನ್ಮಾನಿಸಲಾಯಿತು. ಅಮಿತಾಂಜಲಿ ಕಿರಣ್ ಕಾರ್ಯಕ್ರಮ ನಿರೂಪಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!