BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆಯಲ್ಲಿ ಪ್ರಸಾದನ ಕಾರ್ಯಗಾರ

ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಪ್ರಸಾಧನ ಕಾರ್ಯಗಾರ ಇತ್ತೀಚೆಗೆ ಜರುಗಿತು. ಕಾರ್ಯಾಗಾರದ ಉದ್ಘಾಟನೆಯನ್ನು ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆಗಿರುವ ಶ್ರೀ ಸಂದೀಪ್ ಶೆಟ್ಟಿ ನೆರವೇರಿಸಿ ನೃತ್ಯ ಕಲಾವಿದರಿಗೆ ಪ್ರಸಾದನ ಕಾರ್ಯಗಾರ ವೆನ್ನುವುದು ಕಲಾ ಪ್ರದರ್ಶನಕ್ಕೆ ಪೂರಕ ಅಂಶಗಳು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಸಾದನ ಕಾರ್ಯಗಾರವನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಆರ್ ಕೆ ಕಲಾ ತಂಡಗಳ ನಿರ್ದೇಶಕರು, ಬಹುಮುಖ ಪ್ರತಿಭೆಯ ಸಂಪನ್ಮೂಲ ವ್ಯಕ್ತಿ ಶ್ರೀ ರಾಜೇಶ್ ವಿಟ್ಲ ಅವರು ಭರತ ನಾಟ್ಯ ಮುಖವರ್ಣಿಕೆ, ಕೇಶ ವಿನ್ಯಾಸ, ವಸ್ತ್ರ ವಿನ್ಯಾಸ ದ ಬಗ್ಗೆ ವಿವರಣೆ ಹಾಗು ಪ್ರಾತ್ಯಕ್ಷಿಕೆ ಯೊಂದಿಗೆ ಬಹಳ ಉತ್ತಮ ರೀತಿಯಲ್ಲಿ ಶಿಬಿರಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ನಡೆಸಿಕೊಟ್ಟರು. ಉದ್ಘಾಟನಾ ಕಾರ್ಯಕ್ರಮದಲ್ಲಿ ರಂಗ ನಿರ್ದೇಶಕರು ಖ್ಯಾತ ನಿರೂಪಕರು ಆದ ಶ್ರೀ ಯೋಗೀಶ್ ಕೊಳಲಗಿರಿ, ನಾಟ್ಯಾಲಯದ ನೃತ್ಯ ಗುರುಗಳು ನಿರ್ದೇಶಕರು ಆಗಿರುವ ಶ್ರೀ ಭವಾನಿಶಂಕರ್ ಉಪಸ್ಥಿತರಿದ್ದರು.

ಸುಮಾರು 80 ಶಿಬಿರಾರ್ಥಿಗಳು ಭಾಗವಹಿಸಿದ್ದ ಕಾರ್ಯಾಗಾರದಲ್ಲಿ ಪೋಷಕರು ಕೂಡ ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು. ಕಾರ್ಯಗಾರವನ್ನು ನೆರವೇರಿಸಿ ಕೊಟ್ಟ ಸಂಪನ್ಮೂಲ ವ್ಯಕ್ತಿ ಶ್ರೀ ರಾಜೇಶ್ ವಿಟ್ಲ ರವರಿಗೆ ಸಮ್ಮಾನ ಹಾಗೂ ಉದ್ಘಾಟಕರಿಗೆ ಗೌರವ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಶ್ರೀ ಭ್ರಾಮರಿ ನಾಟ್ಯಾಲಯದ ಗುರುಗಳಾದ ಶ್ರೀ ಭವಾನಿಶಂಕರ್ ಅವರು ಸರ್ವರನ್ನು ಸ್ವಾಗತಿಸಿ , ಶ್ರೀ ಸುಬ್ರಹ್ಮಣ್ಯ ಆಚಾರ್ಯ ಅವರು ವಂದಿಸಿ ಕಾರ್ಯಕ್ರಮ ನಿರೂಪಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!