BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಸಾಹಿತಿ ಬಾನು ಮುಷ್ತಾಕ್ ಅವರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ

ಪ್ರತಿಷ್ಟಿತ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಗೆ ಪ್ರವೇಶ ಪಡೆದಿದ್ದ ಸಾಹಿತಿ ಬಾನುಮುಷ್ತಾಕ್ ಅವರ ಸಣ್ಣ ಕಥೆಗಳ ಅನುವಾದಿತ ಸಂಕಲನ ‘ಹಾರ್ಟ್ ಲ್ಯಾಂಪ್’ ಕೃತಿ ಅಂತಿಮ ಸುತ್ತಿಗೆ ಆಯ್ಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಹಾಸನದಲ್ಲಿ ಬಾನುಮುಷ್ತಾಕ್ ಅವರ ಮನೆಗೆ ಭೇಟಿ ನೀಡಿ, ಅಮೃತ ಬೀಜ ಕೃತಿ ನೀಡಿ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ತಗಡೂರು ಅವರು, ಹಾಸನದಿಂದ ಪಿ.ಲಂಕೇಶ್ ಪತ್ರಿಕೆಯ ವರದಿಗಾರರಾಗಿ ಗುರುತಿಸಿಕೊಂಡ ಭಾನುಮುಷ್ತಾಕ್ ಅವರು ವಕೀಲರಾಗಿ, ನಗರಸಭೆ ಸದಸ್ಯರಾಗಿ ಹಾಗೂ ಪ್ರಗತಿಪರ ಸಾಹಿತಿಯಾಗಿ ಗುರುತಿಸಿಕೊಂಡವರು. ಅನ್ಯಾಯದ ವಿರುದ್ದ ಧ್ವನಿ ಎತ್ತಿದವರು. ಸಂಘಟಕಿಯಾಗಿಯೂ ಕೆಲಸ ಮಾಡಿದವರು. ಅವರ ಕೃತಿ ಬುಕರ್ ಪ್ರಶಸ್ತಿಯ ಹೊಸ್ತಿಲಿನ ತನಕ ಬಂದು ನಿಂತಿರುವುದು ಹೆಮ್ಮೆಯ ಸಂಗತಿ ಎಂದರು.

ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿದ ಹಸೀನಾ ಚಲನಚಿತ್ರ ಕಥೆ ಕೂಡ ಬಾನುಮುಷ್ತಾಕ್ ಅವರ ಹಸೀನಾ ಮತ್ತು ಇತರ ಕಥೆಗಳಿಂದಲೇ ಆಯ್ಕೆ ಮಾಡಿದ್ದು. ಹಸೀನಾ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಿಕ್ಕಾಗ ಇಡೀ ತಂಡವನ್ನು ಹಾಸನಕ್ಕೆ ಆಹ್ವಾನಿಸಿದ್ದ, ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಕಲಾಭವನದಲ್ಲಿ ಏರ್ಪಡಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸನ್ಮಾನಿಸಿತ್ತು. ಅದೆಲ್ಲವೂ ಮರೆಯಲಾಗದ ಕ್ಷಣ ಎನ್ನುವುದನ್ನು ಶಿವಾನಂದ ತಗಡೂರು ಸ್ಮರಿಸಿದರು.

ಬಾನುಮುಷ್ತಾಕ್ ಅವರ ಹಾರ್ಟ್ ಲ್ಯಾಂಪ್ ಕೃತಿ ಬುಕರ್ ಪ್ರಶಸ್ತಿಗೆ ಭಾಜನವಾಗಲಿ ಎಂದು ಇದೇ ಸಂದರ್ಭದಲ್ಲಿ ಶುಭ ಹಾರೈಸಲಾಯಿತು. 

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೆ.ಆರ್.ಮಂಜುನಾಥ್, ಔಟ್ ಲುಕ್ ಪತ್ರಿಕೆಯ ವರದಿಗಾರ ವಿಕಾರ್ ಅಹಮದ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!