Header Ads Widget

ಜಿಶಂಪಾ ರಾಜ್ಯ ಪ್ರಶಸ್ತಿಗೆ ಗಾಯಕ ಡಾ. ಗಣೇಶ್ ಗಂಗೊಳ್ಳಿ ಆಯ್ಕೆ

ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಬೆಂಗಳೂರು ಇವರ ದಶಮಾನೋತ್ಸವ ಅಂಗವಾಗಿ ಕೊಡಲ್ಪಡುವ ಜಿಶಂಪಾ ರಾಜ್ಯ ಪ್ರಶಸ್ತಿಗೆ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷರು ಪ್ರಸಿದ್ಧ ಗಾಯಕ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಡಾ. ಗಣೇಶ್ ಗಂಗೊಳ್ಳಿ ಇವರನ್ನು ಆಯ್ಕೆ ಮಾಡಲಾಗಿದೆ ಪ್ರಶಸ್ತಿಯನ್ನು ದಿನಾಂಕ: 23/04/2025 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲ್ಮಕ್ಕಿಯಲ್ಲಿ ನಡೆಯುವ ಜಿಲ್ಲಾಮಟ್ಟದ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕನ್ನಡ ಜಾನಪದ ಪರಿಷತ್ ಇದರ ರಾಜ್ಯಾಧ್ಯಕ್ಷರಾದ ಡಾ. ಎಸ್ ಬಾಲಾಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ