Header Ads Widget

ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಉಡುಪಿ: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬುಧವಾರ ನಡೆದ 44ನೇ ವೇಟರನ್ ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಮಟ್ಟದ ಹಿರಿಯರ ಕ್ರೀಡಾ ಕೂಟದಲ್ಲಿ, 60 ವರ್ಷ ಮೇಲ್ಪಟ್ಟ ವಿಭಾಗದ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಉಡುಪಿಯ ನಿವೃತ್ತ ಶಿಕ್ಷಕಿ ಶ್ರೀಮತಿ ಜಯಾ ತಂತ್ರಿ ಕೆ. ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಈ ಸಾಧನೆಯ ಮೂಲಕ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.