Header Ads Widget

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಕಪಿಲ ಗೋ ಮಂದಿರದಲ್ಲಿ 7ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಅಭಿಯಾನ

ಪಶುಪಾಲನ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನದ ಕಪಿಲಾ ಗೋಶಾಲೆಯಲ್ಲಿ ಆಯೋಜಿಸಿದ್ದ 7 ನೇ ಸುತ್ತಿನ ಕಾಲು ಬಾಯಿ ಲಸಿಕೆ ಕಾರ್ಯಕ್ರಮವನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಗೋಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ, ಪ್ರಮುಖರಾದ ಶ್ರೀಮತಿ ಕುಸುಮ ನಾಗರಾಜ್, ವೈದ್ಯಾಧಿಕಾರಿಗಳಾದ ಶ್ರೀ ಪ್ರಶಾಂತ್ ಶೆಟ್ಟಿ ಅರ್ಚಕ ಅನೀಶ್ ಭಟ್, ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲಿ ಶ್ರೀಮತಿ ಉಷಾ ರಮಾನಂದ, ಕಿಲ್ಪಾಡಿ ಶಾರದಮ್ಮ ಗೋವಿಂದ ಭಟ್, ಆನಂದ ಬಾಯರಿ ಹಾಗೂ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.