ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುರ್ಪಾಡಿಯಲ್ಲಿ 2024-25ನೇ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕ ಧ್ವಯರ ಸನ್ಮಾನ ಸಮಾರಂಭವು ಕರ್ಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಇನಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಶ್ರೀ ಸುರೇಶ್ ಶೆಟ್ಟಿ ತಡಾಲು, ಕೊಕ್ಕರ್ಣೆ ಸಿಂಡಿಕೇಟ್ ರೈತರ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ ಕುಮಾರ್ ಶೆಟ್ಟಿ, ದೈಹಿಕ ಪರಿವೀಕ್ಷಣಾಧಿಕಾರಿಗಳಾದ ಶ್ರೀ ನಿತ್ಯಾನಂದ ಶೆಟ್ಟಿ, ಊರಿನ ಪ್ರಮುಖರಾದ ಶ್ರೀ ದೇವಣ್ಣ ನಾಯಕ್, ಬ್ರಹ್ಮಾವರ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಪ್ರಶಾಂತ ಶೆಟ್ಟಿ, ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಶ್ರೀ ಸಾಧು ಸೇರಿಗಾರ್, ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಶಾಂತರಾಜ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಮಿತ್ರ, ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮಿತ್ರ ಶಂಕರ ನಾಯಕ್, ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಮಾಲತಿ ,ನಿಕಟ ಪೂರ್ವ ಸಮೂಹ ಸಂಪನ್ಮೂಲ ವ್ಯಕ್ತಿ ದಿನೇಶ್ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ನಿವೃತ್ತ ಶಿಕ್ಷಕರುಗಳಾದ ಶ್ರೀ ಸತೀಶ್ ಶೆಟ್ಟಿ ಹಾಗೂ ಶ್ರೀ ನಾರಾಯಣ ಶೆಟ್ಟಿಯವರನ್ನು ದಂಪತಿ ಸಮೇತರಾಗಿ ಊರವರು,ಎಸ್ ಡಿ ಎಂ ಸಿ , ಹಳೆ ವಿದ್ಯಾರ್ಥಿಗಳು ಹಾಗೂ ಶಾಲಾ ವತಿಯಿಂದ ಅದ್ದೂರಿಯಾಗಿ ಸನ್ಮಾನಿಸಲಾಯಿತು.ಸನ್ಮಾನ ಪತ್ರವನ್ನು ಶಾಲಾ ಹಳೆ ವಿದ್ಯಾರ್ಥಿ ಶಿಕ್ಷಕರಾದ ಶ್ರೀ ಪ್ರಸನ್ನ ಕುರ್ಪಾಡಿ ಮತ್ತು ಶ್ರೀ ಪೂರ್ಣಚಂದ್ರ ವಾಚಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು.
ಹಳೆ ವಿದ್ಯಾರ್ಥಿ ದೀಕ್ಷಿತ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ ಹಳೆ ವಿದ್ಯಾರ್ಥಿ ಶಿಕ್ಷಕರಾದ ಜಗದೀಶ ಕುರ್ಪಾಡಿ ವಂದಿಸಿದರು .ಶಾಲಾ ಹಳೆ ವಿದ್ಯಾರ್ಥಿಗಳು ಹಾಗೂ ಗೌರವ ಶಿಕ್ಷಕರು ಸಹಕರಿಸಿದರು.