Header Ads Widget

ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ!

ಕರ್ನಾಟಕದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು ರವಿವಾರ (ಎ20) ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಇರುವುದು ಕಂಡು ಬಂದಿದೆ.

1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ & ಐಜಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರಿಗೆ 68 ವರ್ಷ ವಯಸ್ಸು ಎಂದು ತಿಳಿದು ಬಂದಿದೆ.

ಓಂ ಪ್ರಕಾಶ್ ಪತ್ನಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯೇ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ನಿವಾಸಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಓಂ ಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಸೆಂಟ್ಜಾನ್ಸ್‌ ಆಸ್ಪತ್ರೆಗೆ ಸಾಗಿಸಲಾಗಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.