ಕಾರಿನೊಳಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ.
ಮೃತ ವ್ಯಕ್ತಿ ದಿಲೀಪ್ ಎನ್.ಆರ್ ಎಂದು ಗುರುತಿಸಲಾಗಿದೆ.
ದಿಲೀಪ್ ಮಂಗಳೂರಿನಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದರು. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಆಗಿರಬಹುದು ಎಂದು ಶಂಕಿಸಲಾಗಿದೆ.
ಕುಟುಂಬದ ಜೊತೆ ಮಂಗಳೂರಿನಲ್ಲಿ ಉದ್ಯಮಿ ವಾಸವಾಗಿದ್ದರು. ಕಳೆದ ತಡರಾತ್ರಿ, ಬೆಳಗಿನ ಜಾವ ಘಟನೆ ನಡೆದಿದೆ. ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.