ಉಡುಪಿ, ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ ಅಂತರ್ಕಕ್ಷ್ಯಾ 30 ಗಜಗಳ ಕ್ರಿಕೆಟ್ ಮತ್ತು ಥ್ರೋ ಬಾಲ್ ಪಂದ್ಯಾಟಗಳ ಉದ್ಘಾಟನೆ ಏಪ್ರಿಲ್ 26 ರಂದು ಕಾಲೇಜು ಕ್ರೀಡಾಂಗಣದಲ್ಲಿ ಜರಗಿತು.
ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಮನೋಹರ ಶೆಟ್ಟಿ ತೋನ್ಸೆ ಕಾರ್ಯಕ್ರಮ ಉದ್ಘಾಟಿಸಿ ಪದವಿ ಹಂತದಲ್ಲಿ ಈ ತರದ ಕ್ರೀಡೆಗಳನ್ನು ವಿದ್ಯಾರ್ಥಿಗಳೇ ಆಯೋಜಿಸಿ ನಿರ್ವಹಿಸುವುದು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯೆ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು.
ಉಪಪ್ರಾಚಾರ್ಯ ಶ್ರೀ ರಾಧಾಕೃಷ್ಣ ರಾವ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಹರಿಕೇಶವ್, ವಿದ್ಯಾರ್ಥಿಗಳ ಪರವಾಗಿ ಮುಖ್ಯ ಆಯೋಜಕರಾದ ವಿನೀಶ್, ಕೀರ್ತನ್, ಪ್ರಜ್ವಲ್, ತೇಜಸ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಶ್ರಾವ್ಯ ರಾವ್ ಸ್ವಾಗತಿಸಿದರು, ಸಿಂಚನ ಶೆಟ್ಟಿಗಾರ್ ವಂದಿಸಿದರು, ಶರಣ್ಯ ಕಾರ್ಯಕ್ರಮ ನಿರೂಪಿಸಿದರು.