Header Ads Widget

ಯುಪಿಎಂಸಿ- ಎಕ್ಸ್ ಪ್ಲೋರಿಕಾ-2025- ಕರ್ಟನ್ ರೈಸರ್

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಏಪ್ರಿಲ್ 25 ರಂದು ಅಂತರ್ಕಕ್ಷ್ಯಾ ಮೆಗಾ ಇವೆಂಟ್ ಎಕ್ಸ್ ಪ್ಲೋರಿಕಾ-25 ರ ಕರ್ಟನ್ ರೈಸರ್ ಕಾರ್ಯಕ್ರಮಕ್ಕೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಶ್ರೀ ರವಿರಾಜ್ ಹೆಚ್. ಪಿ ವಿದ್ಯುಕ್ತ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯೆ ಶ್ರೀಮತಿ ಆಶಾ ಕುಮಾರಿ, ಉಪ ಪ್ರಾಚಾರ್ಯ ಶ್ರೀ ರಾಧಾಕೃಷ್ಣ ರಾವ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಹರಿಕೇಶವ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶರಣ್ಯ ಕಾರ್ಯಕ್ರಮ ನಿರೂಪಿಸಿದರು.