BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕರಾವಳಿ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ - ಶ್ರೀ ಕೈವಲ್ಯ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಶಿವಾನಂದ ಸರಸ್ಪತಿ ಶ್ರೀಪಾದರು ದೇವಳಕ್ಕೆ ಭೇಟಿ

ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ  ತೆಂಕಪೇಟೆ ಉಡುಪಿ, ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವಕ್ಕೆ, ಯುಗಾದಿಯ ಹಬ್ಬದ ಪರ್ವಕಾಲದಲ್ಲಿ ಸೋಮವಾರ ಪೂಜ್ಯಶ್ರೀ ಶ್ರೀ ಕೈವಲ್ಯ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಶಿವಾನಂದ ಸರಸ್ಪತಿ ಶ್ರೀಪಾದರು ದೇವಳಕ್ಕೆ ಭೇಟಿ ನೀಡಿದರು.     

ದೇವಳದ ವತಿಯಿಂದ ಪೂಜ್ಯ ಶ್ರೀಗಳನ್ನು ಮಂಗಳವಾದ್ಯ , ವೇದಘೋಷ ದೊಂದಿಗೆ ಹಾಗೂ ಪೂರ್ಣ ಕುಂಭ ದಿಂದ ಸ್ವಾಗತಿಸಿ ಬರಮಾಡಿಕೊಂಡು ಪಾದ ಪೂಜೆ ಮಾಡಿ ಫಲ ಪುಷ್ಪ ಕಾಣಿಕೆ ನೀಡಿ ಗೌರವಿಸಲಾಯಿತು. ಸ್ವಾಮೀಜಿಯವರು ಶ್ರೀ ಲಕ್ಷ್ಮೀ ವೆಂಕಟೇಶ ದೇವರಿಗೆ, ಭಜನಾ ಮೊಹೋತ್ಸವದ ಶ್ರೀ ವಿಠೋಬಾ ರುಖುಮಾಯಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇವಳದಲ್ಲಿ ಜರಗುವ ಶ್ರೀ ರಾಮನಾಮ ಜಪ ಕೇಂದ್ರಕ್ಕೆ ಭೇಟಿ ನೀಡಿ ಜಪ ಅಭಿಯಾನದ ಪಧಾಧಿಕಾರಿಗಳಿಗೆ ಶುಭ ಹಾರೈಸಿದರು.                                        

ತಮ್ಮ ಅನುಗ್ರಹ ಸಂದೇಶದಲ್ಲಿ ನಮ್ಮ ಹಿರಿಯರ ಪೂರ್ವ ಜನ್ಮದ ಫಲದಿಂದಾಗಿ ಈ ದೇವಾಲಯ ನಿರ್ಮಾಣ ಗೊಂಡಿದೆ. ನಮ್ಮ ಹಿರಿಯರು ಆರಂಭಿಸಿದ ಹರಿನಾಮ ಸಂಕೀರ್ತನೆ ಗೆ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ನೆಡೆಸುತ್ತಿರುವುದು ಸಂತಸವಾಗಿದೆ. ನಾಮ ಸ್ಮರಣಿ ವೆಂಬುದು ಯಜ್ಞ ಕಾರ್ಯಕ್ಕೆ ಸಮನಾಗಿದೆ. ನಿರಂತರ ಭಗವಂತನಾ ಆರಾಧನೆಯಿಂದ ಮುಕ್ತಿ ಪ್ರಾಪ್ತಿ ಗುರುವಿನ ಹಾಗೂ ಶ್ರೀ ದೇವರ ವಿಶೇಷ ಅನುಗ್ರಹ ನಿಮ್ಮಲ್ಲರ ಮೇಲೆ ಸದಾ ಇರಲಿ ಎಂದು ಅನುಗ್ರಹಸಿದರು.

                                                                                                                                                                                                                                                                                                                                               ದೇವಳದ ಪ್ರಧಾನ ಅರ್ಚಕರಾದ ವಿನಾಯಕ ಭಟ್, ವೇದ ಮೂರ್ತಿ ಚೇ೦ಪಿ ರಾಮಚಂದ್ರ ಭಟ್, ದೇವಳದ ಮುಕ್ತೇಸರ ಪಿ ವಿ ಶೆಣೈ, ದೇವಳದ ಭಜನಾ ಮಂಡಳಿಯ ಅಧ್ಯಕ್ಷ ಮಟ್ಟಾರ್ ಸತೀಶ್ ಕಿಣಿ, ಸಂತೋಷ್ ವಾಗ್ಲೇ, ಆಡಳಿತ ಮಂಡಳಿಯ ಸದಸ್ಯರಾದ ವಸಂತ್ ಕಿಣೆ , ಪುಂಡಲೀಕ್ ಕಾಮತ್, ಶಾಂತಾರಾಮ್ ಪೈ, ಗಣೇಶ್ ಕಿಣಿ , ಉಮೇಶ್ ಪೈ, ಕೈಲಾಸನಾಥ ಶೆಣೈ, ನಾರಾಯಣ ಪ್ರಭು , ಅಶೋಕ ಬಾಳಿಗ , ರೋಹಿತಾಕ್ಷ ಪಡಿಯಾರ್ ಹಾಗೂ ವಿವಿಧ ಭಜನಾ ಮಂಡಳಿಯ ಸದಸ್ಯರು, ಜಿ ಎಸ್ ಬಿ ಯುವಕ /ಮಹಿಳಾ ಮಂಡಳಿಯ ಸದಸ್ಯರು, ಊರ ಪರಊರ ಸಾವಿರಾರು ಸಮಾಜ ಭಾಂದವರು ಉಪಸ್ಥರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!