BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ರಾಷ್ಟ್ರೀಯ

ಐಪಿಎಲ್ 2025ರ ಉಳಿದ ಪಂದ್ಯಗಳು ಅಮಾನತು!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮ ಉಂಟಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಉದ್ವಿಗ್ನತೆಯ ಪರಿಣಾಮ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL)‌ ನ ಉಳಿದ ಪಂದ್ಯಗಳನ್ನು ಬಿಸಿಸಿಐ ಅಮಾನತು ಮಾಡಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪಂದ್ಯಾವಳಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ನಂತರ, ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಅಭಿಮಾನಿಗಳ ಸುರಕ್ಷತೆಯೇ ಪ್ರಮುಖ ಕಾಳಜಿ ಎಂದು ಘೋಷಿಸಿದೆ.

ಗುರುವಾರ (ಮೇ 08) ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್‌ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯವನ್ನು ಜಮ್ಮು ಮತ್ತು ಪಠಾಣ್‌ಕೋಟ್‌ನಲ್ಲಿ ವಾಯುದಾಳಿ ಎಚ್ಚರಿಕೆಯ ಕಾರಣದಿಂದ ಮಧ್ಯದಲ್ಲೇ ರದ್ದು ಮಾಡಲಾಗಿದೆ.

ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಆರಂಭದಲ್ಲಿ ಮೇ 9 ರಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಯೋಜಿಸಿದಂತೆ ನಡೆಯಲಿದೆ ಎಂದು ಸೂಚಿಸಿದ್ದರೂ, ಹದಗೆಟ್ಟ ಭದ್ರತಾ ಪರಿಸ್ಥಿತಿಯು ಹೊಸ ನಿರ್ಧಾರಕ್ಕೆ ಕಾರಣವಾಗಿದೆ.

ಮುಂದಿನ ಸೂಚನೆ ಬರುವವರೆಗೂ ಲೀಗ್ ಅನ್ನು ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತಿದೆ ಎಂದು ಬಿಸಿಸಿಐ ದೃಢಪಡಿಸಿದೆ.

ಹಲವಾರು ಅಂತಾರಾಷ್ಟ್ರೀಯ ಆಟಗಾರರು ಮತ್ತು ತರಬೇತುದಾರರು ಭಾಗಿಯಾಗಿರುವುದರಿಂದ ಈ ನಿರ್ಧಾರವು ವಿದೇಶಿ ಕ್ರಿಕೆಟ್ ಮಂಡಳಿಗಳ ಗಮನವನ್ನೂ ಸೆಳೆದಿದೆ. ಕ್ರಿಕೆಟ್ ಆಸ್ಟ್ರೇಲಿಯಾ ಶುಕ್ರವಾರ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಭಾರತದಲ್ಲಿರುವ ತನ್ನ ಸಿಬ್ಬಂದಿಯೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!