ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (IFWJ)ರಾಷ್ಟ್ರೀಯ ಅಧ್ಯಕ್ಷರಾದ ಕೆ. ವಿಕ್ರಂರಾವ್ (82) ಅವರು ಇಂದು ಬೆಳಿಗ್ಗೆ ಉತ್ತರ ಪ್ರದೇಶದ ಲಕ್ನೋ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷರಾಗಿ ಕಳೆದ ಮೂರು ದಶಕ ಗಳಿಂದ ಸೇವೆ ಸಲ್ಲಿಸಿದ್ದ ವಿಕ್ರಂ ರಾವ್ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಮತ್ತು ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನವನ್ನು ಆಯೋಜಿಸಲಾಗಿತ್ತು.
ರಾಷ್ಟ್ರ ಮಟ್ಟದಲ್ಲಿ ಗ್ರಾಮೀಣ ಪತ್ರಕರ್ತರನ್ನು ಸಂಘಟಿಸಿ ಯಶಸ್ವಿಯಾಗಿದ್ದ ವಿಕ್ರಮ್ ರಾವ್ ಅವರು ಪತ್ನಿ ಇಬ್ಬರು ಪುತ್ರರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕೆಯುಡಬ್ಲ್ಯೂಜೆ ಸಂತಾಪ:
ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಸುಧೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತರಾದ ಕೆ.ವಿಕ್ರಮರಾವ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪತ್ರಕರ್ತರ ಸಂಘಟನೆಗಾಗಿ ಅವರು ಮಾಡಿದ ಸೇವೆಯು ಅನನ್ಯವಾದದ್ದು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸ್ಮರಿಸಿದ್ದು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಸಂತಾಪ:
ಸುಧೀರ್ಘ ಅವಧಿಗೆ IFWJ ಅಧ್ಯಕ್ಷರಾಗಿದ್ದ ವಿಕ್ರಮ್ ರಾವ್ ಅವರ ನಿಧನದಿಂದ ಪತ್ರಕರ್ತರ ಸಂಘಟನೆಯ ಪ್ರಮುಖ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು IFWJ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಮತ್ತು ಅಪರ ಪ್ರಧಾನ ಕಾರ್ಯದರ್ಶಿ ಎಚ್.ಬಿ ಮದನಗೌಡ ಅವರು ಸಂತಾಪ ವ್ಯಕ್ತಪಡಿಸಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ.