ಬೆಂಗಳೂರಿನಿಂದ ಬರುತ್ತಿದ್ದ ನಾಲ್ಕು ಬಸ್ಸುಗಳಿಗೆ ಕಿಡಿಗೇಡಿಗಳು ನಸುಕಿನ ವೇಳೆಯಲ್ಲಿ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಇದರ ಬೆನ್ನಲ್ಲೇ ಕೆ ಎಸ್ ಆರ್ ಟಿ ಸಿ ಕೂಡ ಬಸ್ಸು ಸಂಚಾರವನ್ನು ಸ್ಥಗಿತಗೊಳಿಸಿದೆ.
ಅಲ್ಲದೆ ಪಂಪ್ ವೆಲ್ ಬಳಿ ನಾಲ್ಕು ಬಸ್ಸುಗಳಿಗೆ ಕಲ್ಲು ತೂರಾಟ ನಡೆಸಲಾಗಿದ್ದು ಅದೃಷ್ಠವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಬಸ್ಸುಗಳ ಗಾಜುಗಳು ಒಡೆದಿದ್ದು ಹಾಗಾಗಿ ಬಸ್ಸು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ನಗರದಲ್ಲಿ ಬಹುತೇಕ ಅಂಗಡಿಗಳು ಮುಚ್ಚಿದ್ದು ಜನರ ಸಂಚಾರ ವಿರಳವಾಗಿದೆ. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯ ಕಂಡು ಬಂದಿದೆ.
ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ನಗರದ ಕೆಎಸ್ಸಾರ್ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುಂತಾಗಿದೆ. ಮುಲ್ಕಿ, ಉಡುಪಿ, ಕುಂದಾಪುರ ಕಡೆಗಳಿಂದ ಕಾಲೇಜಿಗಾಗಿ ಬಂದ ವಿದ್ಯಾರ್ಥಿಗಳು ಬಂದ್ ಹಿನ್ನೆಲೆಯಲ್ಲಿ ಕಾಲೇಜುಗಳು ಮುಚ್ಚಿರುವ ಕಾರಣ ಮನೆಗೆ ಮರಳಲೂ ಆಗದ ಪರಿಸ್ಥಿತಿ ಉಂಟಾಗಿದೆ. ಹಾಗೂ ಬಸ್ ಇಲ್ಲದೆ ಉಡುಪಿಯಲ್ಲಿ ಸಾರ್ವಜನಿಕರು ಬಸ್ಸಿಗಾಗಿ ಕಾಯುತ್ತಿರುವ ಚಿತ್ರಣ ಕಂಡು ಬಂದಿದೆ.
ಪರಿಸ್ಥಿತಿ ಸಹಜ ಸ್ಥಿತಿಗೆ ಬರುವ ತನಕ ಬಸ್ಸುಗಳನ್ನು ರಸ್ತೆಗಿಳಿಸಬಾರದೆಂದು ರಾಜ್ಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಸುಹಾಸ್ ಶೆಟ್ಟಿ ಹಾಗೂ ಐದು ಜನ ಕಾರ್ಯಕರ್ತರು ಅವರ ಕಾರಿನಲ್ಲಿ ತೆರಳುತ್ತಾ ಇದ್ದರು. ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು ಸುಹಾಸ್ ಹತ್ಯೆ ಮಾಡಿದ್ದಾರೆ. ಇದೊಂದು ಪೂರ್ವ ಯೋಜಿತ ಹತ್ಯೆ, ಇದರ ಹಿಂದೆ ನಿಷೇಧಿತ ಪಿಎಫ್ಐ ಕೈವಾಡ ಇದೆ. ಹೀಗಾಗಿ ಬಂದ್ಗೆ ಕರೆ ನೀಡಿದ್ದೇವೆ. ಪೊಲೀಸ್ ಇಲಾಖೆ ವೈಫಲ್ಯದ ವಿರುದ್ದ ನಾವು ಹೋರಾಟ ಮಾಡುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.