BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಪಿಪಿಸಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಚಂದ್ರಕಾಂತ್ ಭಟ್ ಅಧಿಕಾರ ಸ್ವೀಕಾರ

ಉಡುಪಿ: ಇಲ್ಲಿನ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾಗಿ ಇತಿಹಾಸ ವಿಭಾಗದ ಮುಖ್ಯಸ್ಥ, ಸಹ ಪ್ರಾಧ್ಯಾಪಕ ಡಾ.ಚಂದ್ರಕಾಂತ್ ಭಟ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಸುದೀರ್ಘ ಅನುಭವ ಹೊಂದಿರುವ ಇವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಎಂಫಿಲ್ ಪದವಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ. ಇವರು ಸಂಶೋಧನಾ ವಲಯದಲ್ಲಿಯೂ ಗುರುತರವಾದ ಸಾಧನೆಯನ್ನು ಮಾಡಿದ್ದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಇವರ ಸಂಶೋಧನಾ ಬರಹಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

2008 ರಿಂದ 2013 ರವರೆಗೆ ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2013 ರಿಂದ 2016 ರವರೆಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2016 ರಿಂದ 2018 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿಶೇಷ ಅಧಿಕಾರಿಯಾಗಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸಿ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ಇವರು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನವನ್ನೂ ನೀಡುತ್ತಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!