BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕರಾವಳಿ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್; ಇಂದು (ಮೇ 26) ಅಂಗನವಾಡಿಗಳಿಗೆ ರಜೆ ಘೋಷಣೆ!

ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ. ‌

ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ ದಿನ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದ್ದಾರೆ.

ಸಾರ್ವಜನಿಕರು ಸಹ ಎಚ್ಚರಿಕೆ ವಹಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!