ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆ ನಡೆದ ಬೆನ್ನಲ್ಲೇ ಮಂಗಳೂರು ನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಎನ್‌ಎಸ್ ಸೆಕ್ಷನ್ 163 ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶಿಸಿದ್ದಾರೆ.
ಮೇ.6ರ ಸಂಜೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ವ್ಯಾಪಕ ಭದ್ರತೆ : ವಿವಿದ ಜೆಲ್ಲೆಗಳ ಸುತ್ತಮುತ್ತಲಿನ ಅನೇಕ ಕಡೆಗಳಿಂದ ಪೊಲೀಸರನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ.
ವಿವಿಧೆಡೆ ಬಂದ್ ವಾತಾವರಣ : ಸುಹಾಸ್ ಹತ್ಯೆ ಖಂಡಿಸಿ ಇಂದು (ಮೇ-2, ಶುಕ್ರವಾರ), ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದ್ದಾರೆ.