Header Ads Widget

ಕೋಟ : ಟಿಟಿ ವಾಹನ ಪಲ್ಟಿ, ಹಲವರಿಗೆ ಗಾಯ!

ಟಿಟಿ ವಾಹನ ಪಲ್ಟಿಹೊಡೆದು ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಹೈಸ್ಕೂಲ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.

ಕೇರಳದಿಂದ ಕೊಲ್ಲೂರಿಗೆ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಹೊಡೆದು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಇಂದಿರಾ ಲ್ಯಾಬ್ ಸಮೀಪದ ಕಂದಕಕ್ಕೆ ಉರುಳಿದೆ.

ಸುಮಾರು 15 ಜನ ಪ್ರಯಾಣಿಕರಿದ್ದು ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಆಂಬುಲೆನ್ಸ್ ನಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಿರುತ್ತಾರೆ.

ಕೋಟ ಠಾಣಾ ಎಸ್ಸೈ ಸುಧಾ ಪ್ರಭು ಸಿಬ್ಬಂದಿಯೊಡನೆ ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.