ಬಂಟ್ವಾಳ : ಬೈಕಿನಲ್ಲಿ ಬಂದ ಇಬ್ಬರಿಂದ ಪಿಕಪ್ ಚಾಲಕನ ಬರ್ಬರ ಹತ್ಯೆ!



ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದಿದೆ.

ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ.

ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.

ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಕಡಿಯಲಾಗಿದೆ. ಆದರೆ ಆತನಿಗೆ ಕೈಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತ ಪೊಲೀಸರು ಭೇಟಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು