ಐಪಿಎಲ್ 2025 : ಕರುನಾಡಿಗೆ ಮಹಾಜಯ!



ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್‌ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸುವ ಮೂಲಕ ʻಈ ಸಲ ಕಪ್‌ ನಮ್ದೇʼ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಗಿಫ್ಟ್‌ ನೀಡಿದೆ.

17 ವರ್ಷಗಳಿಂದ ಆರ್ಸಿಬಿ ಕೈಗೆಟುಕದ ಗಗನ ಕುಸುಮವೊಂದು ಇದೀಗ ಐಪಿಎಲ್ ಕಿರೀಟವಾಗಿ ಆರ್ಸಿಬಿ ಮುಡಿಗೇರಿದೆ. ಕೋಟ್ಯಾಂತರ ಆರ್ಸಿಬಿ ಅಭಿಮಾನಿಗಳ ಪ್ರಾಥನೆ ಕೊನೆಗೂ ಫಲಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿದ ಆರ್ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ ಗಳಿಸಿತು. ಆರ್‌ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿದ ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದರು. ಪಂಜಾಬ್ ಪರ ಕೈಲ್ ಜೇಮಿಸನ್ ಮತ್ತು ಅರ್ಶ್‌ದೀಪ್ ಸಿಂಗ್ ತಲಾ ಮೂರು ವಿಕೆಟ್ ಪಡೆದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 184 ರನ್‌ಗಳಿಸಲಷ್ಟೇ ಶಕ್ತವಾಯಿತು. ಪಂಜಾಬ್ ಪರ ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು