BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಂಘ ಸಂಸ್ಥೆ

ಬೈಂದೂರು ಹಿರಿಯ ನಾಗರಿಕರ ವೇದಿಕೆ - ವಿಶ್ವ ಯೋಗ ದಿನಾಚರಣೆ

ನಿವೃತ್ತ ಮುಖ್ಯ ಶಿಕ್ಷಕ, ರಾಜ್ಯ ಮಟ್ಟದ ಯೋಗ ಸಂಪನ್ಮೂಲ ವ್ಯಕ್ತಿ ನಾರಾಯಣ ದೇವಾಡಿಗ ಅವರ ನೇತೃತ್ವದಲ್ಲಿ ಹಿರಿಯ ನಾಗರಿಕರು ಯೋಗಾಸನ ಮಾಡಿದರು. ನಂತರ ವೇದಿಕೆಯ ಅಧ್ಯಕ್ಷ ಗಿರೀಶ್ ಶ್ಯಾನುಭಾಗರ ಅಧ್ಯಕ್ಷತೆಯಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ, ಯೋಗಗುರು ನಾರಾಯಣ ದೇವಾಡಿಗರಿಗೆ ಸನ್ಮಾನಿಸಲಾಯಿತು. ಸದಸ್ಯ ವೆಂಕಟರಮಣರು ಲಯಬದ್ಧವಾಗಿ ಯೋಗ ಗೀತೆ ಹಾಡಿದರು. ನಿಕಟ ಪೂರ್ವ ಅಧ್ಯಕ್ಷ ಪುಂಡಲೀಕ ನಾಯಕರು ಯೋಗದ ಮಹತ್ವವನ್ನು ವಿವರಿಸಿ ಸ್ವರಚಿತ ಯೋಗ ಕವನ ವಾಚಿಸಿದರು.ಆರಂಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಉಮೇಶ ರಾಯ್ಕರ್ ಅವರಿಂದ ಪ್ರಾರ್ಥನೆ, ಕಾರ್ಯದರ್ಶಿ ಗೋವಿಂದ ಬಿಲ್ಲವರಿಂದ ಗತಸಭೆಯ ವರದಿವಾಚನ, ಕಾರ್ಯಕ್ರಮ ನಿರೂಪಣೆ ನಡೆಯಿತು. ಕಾರ್ಯಕ್ರಮಕ್ಕೆ ಸಹಯೋಗ ನೀಡಿದ ಸೀನಿಯರ್ ಛೇಂಬರ್ ವತಿಯಿಂದ ಉಪಹಾರ ವ್ಯವಸ್ಥೆ ಮಾಡಲಾಯಿತು. ವೇದಿಕೆ ಉಪಾಧ್ಯಕ್ಷ ಜಿ.ಈಶ್ವರ,ಸೀನಿಯರ್ ಛೇಂಬರ್'ನ ಅಧ್ಯಕ್ಷ ಶ್ರೀಕಾಂತ್ ‌ಶೆಟ್ಟಿ, ನಿಕಟಪೂರ್ವ ಕಾರ್ಯದರ್ಶಿ ಜಯಾನಂದ ಪಟಗಾರರು ಉಪಸ್ಥಿತರಿದ್ದು ಶುಭಕೋರಿದರು.

ಉಭಯ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮ ಚಂದಗಾಣಿಸಿದರು. ವೇದಿಕೆಯ ನೋಂದಣಿಯನ್ನು ಸ್ವಂತ ವೆಚ್ಚದಲ್ಲಿ ನಿರ್ವಹಿಸಿದ ವೆಂಕಟೇಶ ಕಾರಂತರನ್ನು ಅಭಿನಂದಿಸಲಾಯಿತು. ಕೊನೆಯಲ್ಲಿ ಕಾರ್ಯದರ್ಶಿ ಗೋವಿಂದ ಬಿಲ್ಲವರು ವಂದನಾರ್ಪಣೆ ಮಾಡಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!