Header Ads Widget

ಉಡುಪಿ : ಭಾರೀ ಮಳೆ ಹಿನ್ನಲೆ ಜೂ.17 (ಇಂದು) ಶಾಲಾ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ!

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂ.17ರಂದು (ಮಂಗಳವಾರ) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜು ಐಟಿಐ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಎಂದಿನಂತೆ ನಡೆಯುವುದು. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು